– ಕಾಂಗ್ರೆಸ್‌ನಲ್ಲಿ ಸಿಪಿವೈ ಬೆಳೆಯಲು ಡಿಕೆಶಿ ಬಿಡಲ್ಲ
ಬೆಂಗಳೂರು: ಕಾಂಗ್ರೆಸ್ (Congress) ಬದಲು ಜೆಡಿಎಸ್‌ನಿಂದಲೇ (JDS) ಯೋಗೇಶ್ವರ್ ನಿಲ್ಲಬಹುದಿತ್ತು. ಎನ್‌ಡಿಎಗೆ ಅನುಕೂಲ ಆಗುತ್ತಿತ್ತು. ಸಿಪಿವೈ (CP Yogeshwar) ಈಗ ಪಕ್ಷ ದ್ರೋಹ ಮಾಡಿ ಹೋಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok) ಕಿಡಿಕಾರಿದ್ದಾರೆ.
ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಏನಾಗಿರಲಿಲ್ಲ. ಬಿಜೆಪಿಯ ಸಿದ್ಧಾಂತದಿಂದ ಬಂದವರಲ್ಲ. ಸೈಕಲ್ ಪಾರ್ಟಿ, ಪಕ್ಷೇತರ, ಬೇರೆ ಬೇರೆ ಪಕ್ಷದಿಂದ ಬಂದವರು. ನಾವೂ ಕೂಡ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಗಂಭೀರವಾಗಿ ಮಾಡಿದ್ದೆವು, ಹೈಕಮಾಂಡ್ ಜೊತೆ ಚರ್ಚೆ ಮಾಡಿದ್ದೆವು. ಅವರು ಐದು ಕಡೆಯಿಂದ ಬಿ ಫಾರಂ ತಂದಿದ್ದರು ಎಂದು ಸುದ್ದಿ ಇದೆ. ನಮ್ಮ ಮಾತು ಕೇಳದೆ ಕಾಂಗ್ರೆಸ್ ಸೇರಿದ್ದಾರೆ ಎಂದರು. ಇದನ್ನೂ ಓದಿ: ಡಿಕೆಶಿ ನೇತೃತ್ವದಲ್ಲಿ ರಾಜಕೀಯ ಜೀವನ ಆರಂಭಿಸಿದ್ದೆ, ಮರಳಿ ಮನೆಗೆ ಬಂದಿದ್ದೇನೆ: ಸಿಪಿ ಯೋಗೇಶ್ವರ್
ನಾವೆಲ್ಲರೂ ಇದು ಜೆಡಿಎಸ್ ಟಿಕೆಟ್, ಹೆಚ್‌ಡಿಕೆ ಅವರೇ ತೀರ್ಮಾನ ಮಾಡಬೇಕು ಅಂತನೇ ಹೇಳಿಕೊಂಡು ಬಂದಿದ್ದೆವು. ಹೆಚ್‌ಡಿಕೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಜೆಡಿಎಸ್ ಚಿನ್ಹೆಯಡಿ ಸ್ಪರ್ಧೆಗೆ ಆಫರ್ ಕೊಟ್ಟರು. ಯಾವ ಚಿನ್ಹೆ ಆದರೇನು ಇಲ್ಲಿದ್ದರೆ ಎನ್‌ಡಿಎಯಿಂದನೇ ಸ್ಪರ್ಧೆ ಮಾಡುತ್ತಿದ್ದರು. ಸಿಪಿವೈ ನಮ್ಮಲ್ಲಿ ಸೀನಿಯರ್ ಲೀಡರ್ ಆಗಿದ್ದರು. ಈಗ ಕಾಂಗ್ರೆಸ್‌ನಲ್ಲಿ ಲಾಸ್ಟ್ ಬೆಂಚ್ ಆಗುತ್ತಾರೆ. ಅವರನ್ನು ಅಲ್ಲಿ ಬೆಳೆಯಲು ಡಿಕೆಶಿ ಬಿಡಲ್ಲ. ಕಾಂಗ್ರೆಸ್ ಸೇರಿ ಸಿಪಿವೈ ತಮ್ಮ ಭವಿಷ್ಯ ಹಾಳು ಮಾಡಿಕೊಂಡರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಒಡಿಶಾ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ತಿಂಗಳಿಗೆ 1 ಮುಟ್ಟಿನ ರಜೆ ಘೋಷಣೆ
ಮಂಗಳವಾರವೇ ಸಿಪಿವೈ ಕಾಂಗ್ರೆಸ್ ಸೇರುತ್ತಾರೆ ಎಂದು ನಮಗೆಲ್ಲ ಸುಳಿವಿತ್ತು. ಇದರ ಬಗ್ಗೆ ಜೋಷಿಗೆ ಹೆಚ್‌ಡಿಕೆ ಹೇಳಿದ್ದರು. ಆದರೂ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದೆವು. ಯೋಗೇಶ್ವರ್ ಕಾಂಗ್ರೆಸ್‌ನಲ್ಲಿ ಒಬ್ಬ ಲೀಡರ್ ಆಗಿ ಬೆಳೆಯಲು ಆಗಲ್ಲ. ಅವರು ತಮ್ಮ ಕಾಲಿನ ಮೇಲೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ರಾಯಗಢ ಜಲಪಾತದ ಬಳಿ ಶೂಟಿಂಗ್ ಅಭ್ಯಾಸ ನಡೆಸಿದ್ದ ಹಂತಕರು
ಚನ್ನಪಟ್ಟಣದಲ್ಲಿ ನಾವೇ ಗೆಲ್ಲುತ್ತೇವೆ. ಅವರು ಹೋದರು ಅಂತ ನಮಗೇನೂ ನಷ್ಟ ಆಗಲ್ಲ. ಅವರು ಇಲ್ಲದಿದ್ದಾಗಲೂ ನಾವು ಗೆದ್ದಿದ್ದೇವೆ. ಅವರು ಅವರ ಮಾತೃಪಕ್ಷಕ್ಕೆ ಹೋಗಿದ್ದಾರೆ. ಬಿಜೆಪಿಗೆ ನೋ ಲಾಸ್, ನೋ ಗೇನ್. ಮಂಗಳವಾರ ಕುಮಾರಸ್ವಾಮಿ ಅಭ್ಯರ್ಥಿ ಘೋಷಣೆ ಮಾಡದಿರುವ ಹಿಂದೆ ಇದೇ ಕಾರಣ ಇದ್ದಿರಬೇಕು. ಸಿಪಿವೈ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿ ಇದ್ದರು ಎಂದು ಹೆಚ್‌ಡಿಕೆ ಹೇಳಿದ್ದರು. ಅವರಿಗೆ ಟಿಕೆಟ್ ಕೊಟ್ಟಿದ್ದರೆ ನಮಗೂ ಕಷ್ಟ ಅಂತ ಕುಮಾರಸ್ವಾಮಿ ಹೇಳಿದ್ದರು. ಹಾಗಾಗಿ ಘೋಷಣೆ ಮಾಡಿಲ್ಲವೇನೋ ಎಂದು ಹೇಳಿದರು. ಇದನ್ನೂ ಓದಿ: ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು, ಇದು ಸಾಧ್ಯತೆಯ ಕಲೆ: ಡಿಕೆ ಶಿವಕುಮಾರ್
ಈಗ ಜೆಡಿಎಸ್‌ನವರು ಯಾರಿಗೇ ಟಿಕೆಟ್ ಕೊಟ್ಟರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲಿಸುತ್ತೇವೆ. ಜೆಡಿಎಸ್ ಅಭ್ಯರ್ಥಿ ಯಾರೇ ಆದರೂ ಮುಕ್ತ ಮನಸ್ಸಿನಿಂದ ಕೆಲಸ ಮಾಡಿ ಗೆಲ್ಲಿಸುತ್ತೇವೆ. ಯೋಗೇಶ್ವರ್ ಚನ್ನಪಟ್ಟಣಕ್ಕೆ ಮಾತ್ರ ಸೀಮಿತ. ನಮ್ಮಲ್ಲಿ ಇನ್ನೂ ಪ್ರಬಲ ಒಕ್ಕಲಿಗ ನಾಯಕರಿದ್ದಾರೆ. ಇವರ ಸೇರ್ಪಡೆ ಹಳೇ ಮೈಸೂರು ಭಾಗದ ಮೇಲೆ ಆಗಲ್ಲ. ಶೆಟ್ಟರ್ ಹೀಗೆ ಕಾಂಗ್ರೆಸ್ ಅಂತ ಹೋಗಿ ವಾಪಸ್ ಬಂದಿದ್ದಾರೆ. ಈಗ ಸಿಪಿವೈ ಹೋಗಿದ್ದಾರೆ, ಮುಂದೇನಾಗುತ್ತೆ ಅಂತ ನೀವೇ ನೋಡುತ್ತಿರಿ ಎಂದು ಹರಿಹಾಯ್ದರು. ಇದನ್ನೂ ಓದಿ: ಆಪರೇಷನ್ ಆಲೌಟ್ ಜೆಡಿಎಸ್ – ಸಿಎಂ ಮುಂದೆ ಡಿಕೆಶಿ ಶಪಥ
ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಿದಾಗ ಒಬ್ಬರಿಂದ ಬಿಜೆಪಿ ಸರ್ಕಾರ ಬರಲಿಲ್ಲ. ಆಗ ಯಾರ‍್ಯಾರು ಬಿಜೆಪಿಗೆ ಬಂದ್ರು, ಯಾರು ಕರೆತಂದ್ರು ಅಂತ ಜಗತ್ತಿಗೇ ಗೊತ್ತು. ನಾನೂ ಅವರನ್ನು ಕರೆತಂದೆ. ಯಡಿಯೂರಪ್ಪ, ವಿಜಯೇಂದ್ರ ಸಹ ಕರೆತಂದಿದ್ದಾರೆ. ಯೋಗೇಶ್ವರ್ ಒಬ್ಬರೇ ಕಾರಣರಲ್ಲ. ಪಕ್ಷ ಬಿಟ್ಟು ಪಕ್ಷ ಹೋಗುತ್ತಾರೆ ಅಂದರೆ ಅವರಿಗೆ ನಿಷ್ಠೆ ಇಲ್ಲ ಎಂದರ್ಥ. ಕಾಂಗ್ರೆಸ್‌ನಲ್ಲಿ ಯೋಗೇಶ್ವರ್‌ಗೆ ಖಂಡಿತ ಭ್ರಮನಿರಸನ ಆಗುತ್ತೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಕೋಲಾರ | ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ