ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಂಪುಟದ ಸಚಿವರು ಹಾಗೂ ಅವರ ಕುಟುಂಬದವರ ಎಲ್ಲಾ ಆಸ್ತಿಯ ವಿವರಗಳನ್ನು 3 ತಿಂಗಳುಗಳ ಒಳಗಾಗಿ ಬಹಿರಂಗ ಪಡಿಸುವಂತೆ ಆದೇಶ ನೀಡಿದ್ದಾರೆ.
ಯುಪಿ ಸಿಎಂ ತಮ್ಮ ಸಂಪುಟದ ಸದಸ್ಯರೊಂದಿಗೆ, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೂ ತಮ್ಮ ಆಸ್ತಿಯ ವಿವರಗಳನ್ನು ಆನ್‌ಲೈನ್‌ನಲ್ಲಿ ಬಹಿರಂಗ ಪಡಿಸುವಂತೆ ತಿಳಿಸಿದ್ದಾರೆ. ಇದರೊಂದಿಗೆ ಸರ್ಕಾರಿ ಕೆಲಸಗಳಲ್ಲಿ ಸಂಸದರ ಸಂಬಧಿಕರು ಮಧ್ಯ ಪ್ರವೇಶಿಸಬಾರದು ಎಂದು ಆದಿತ್ಯನಾಥ್ ಸೂಚಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ
Advertisement
Advertisement
ಸಂಪುಟ ಸಭೆಯ ಬಳಿಕ ವಿಶೇಷ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ, ಐಎಎಸ್, ಐಪಿಎಸ್ ಹಾಗೂ ಪ್ರಾಂತೀಯ ನಾಗರಿಕ ಸೇವಾ ಅಧಿಕಾರಿಗಳು ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿಯನ್ನು ಘೋಷಿಸಬೇಕು. ಅದನ್ನು ಜನರು ನೋಡುವಂತೆ, ಆನ್‌ಲೈನ್ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: YSRP ಪೋಸ್ಟರ್‌ಗಳಿಗೆ ಹಾನಿ – 3, 4ನೇ ತರಗತಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸ್ರು
Advertisement
ಪ್ರಜಾಪ್ರಭುತ್ವದ ಒಳಿತಿಗಾಗಿ, ಸಾರ್ವಜನಿಕ ಪ್ರತಿನಿಧಿಗಳ ನಡವಳಿಕೆ ಬಹಳ ಮುಖ್ಯವಾದುದು. ಹೀಗಾಗಿ ಎಲ್ಲಾ ಮಂತ್ರಿಗಳು ತಮ್ಮ ಹಾಗೂ ಕುಟುಂಬದ ಸದಸ್ಯರ ಎಲ್ಲಾ ಚರ ಮತ್ತು ಸ್ಥಿರ ಆಸ್ತಿಯನ್ನು ಮುಂದಿನ 3 ತಿಂಗಳ ಒಳಗಾಗಿ ಸಾರ್ವಜನಿಕವಾಗಿ ಘೋಷಣೆ ಮಾಡಬೇಕು ಎಂದರು.