ಲಕ್ನೋ: ಕಳೆದ 2 ತಿಂಗಳ ಹಿಂದೆ ಹತ್ಯೆಯಾಗಿದ್ದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ನ (Atiq Ahmed) ಜಮೀನನ್ನು ಸರ್ಕಾರ ವಶಪಡಿಸಿಕೊಂಡಿತ್ತು. ಇದೀಗ ಆ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಬಡವರಿಗೆ ಹಂಚಿದ್ದಾರೆ.
ಪ್ರಯಾಗ್‌ರಾಜ್ (Prayagraj) ಬಳಿಯ ಲುಕರ್ಗಂಜ್ ಬಳಿ ಸ್ವಾಧೀನಪಡಿಸಿಕೊಂಡ 1731 ಚ.ಮೀ ಭೂಮಿಯಲ್ಲಿ ಸಿಎಂ ಆದಿತ್ಯನಾಥ್ 2021ರ ಡಿಸೆಂಬರ್ 26ರಂದು ವಸತಿಯೋಜನೆಗೆ ಶಂಕು ಸ್ಥಾಪನೆ ಮಾಡಿದ್ದರು. ಬಳಿಕ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana) ಅಡಿಯಲ್ಲಿ 2 ಬ್ಲಾಕ್‌ಗಳಲ್ಲಿ 76 ಫ್ಲಾಟ್‌ಗಳನ್ನು ನಿರ್ಮಾಣ ಮಾಡಲಾಗಿದೆ.
#WATCH | Uttar Pradesh CM Yogi Adityanath to hand over flats for the poor, built on land confiscated from slain gangster-turned-politician Atiq Ahmed, in Prayagraj shortly.
The CM will handover the keys of 76 of these flats. pic.twitter.com/kaykIUaLSA
— ANI UP/Uttarakhand (@ANINewsUP) June 30, 2023
ಈ ತಿಂಗಳ ಆರಂಭದಲ್ಲಿ ಲಾಟರಿ ಮೂಲಕ ಫ್ಲಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಶುಕ್ರವಾರ ಆದಿತ್ಯನಾಥ್ ಅವರು 76 ಫ್ಲಾಟ್‌ಗಳ ಕೀಲಿಗಳನ್ನು ಬಡವರಿಗೆ ಹಂಚಿಕೆ ಮಾಡಿದ್ದಾರೆ. ಇದನ್ನೂ ಓದಿ: 4 ತಿಂಗಳಲ್ಲಿ ಮೂರನೇ ಬಾರಿಗೆ ಸಂಪುಟಕ್ಕೆ ಸರ್ಜರಿ- ಕೇಜ್ರಿವಾಲ್ ಬಳಿಕ ಅತಿಶಿ ಪ್ರಭಾವಿ ಸಚಿವೆ
ಅಧಿಕಾರಿಗಳ ಪ್ರಕಾರ ಪ್ರತಿ ಫ್ಲಾಟ್‌ಗಳು 41 ಚ.ಮೀ ವಿಸ್ತೀರ್ಣವನ್ನು ಹೊಂದಿದೆ. ಮನೆಗಳಲ್ಲಿ 2 ಕೊಠಡಿಗಳು, ಅಡುಗೆಮನೆ, ಶೌಚಾಲಯ ಒಳಗೊಂಡಿದೆ. ಈ ಫ್ಲಾಟ್‌ಗಳಿಗಾಗಿ 6,000 ಕ್ಕೂ ಹೆಚ್ಚು ಜನರು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ 1,590 ಜನರು ಲಾಟರಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದರು.
2017ಕ್ಕೂ ಮೊದಲು ಬಡವರು, ಉದ್ಯಮಿಗಳು ಅಥವಾ ಸರ್ಕಾರಿ ಸಂಸ್ಥೆಗಳ ಭೂಮಿಯನ್ನು ಯಾವುದೇ ಮಾಫಿಯಾಗಳು ವಶಪಡಿಸಿಕೊಳ್ಳಬಹುದಾಗಿತ್ತು. ಆ ಕಾಲದಲ್ಲಿ ಬಡವರು ಅಸಹಾಯಕರಾಗಿ ನೋಡುತ್ತಿದ್ದರು. ಇಂದು ನಾವು ಅದೇ ಭೂಮಿಯಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸುತ್ತಿದ್ದೇವೆ. ಈ ಮಾಫಿಯಾಗಳಿಂದ ಭೂಮಿಯನ್ನು ವಶಪಡಿಸಿಕೊಂಡಿರುವುದು ದೊಡ್ಡ ಸಾಧನೆಯಾಗಿದೆ ಎಂದು ಆದಿತ್ಯನಾಥ್ ಸಮಾರಂಭದಲ್ಲಿ ತಿಳಿಸಿದ್ದಾರೆ.
100 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ಅತೀಕ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಈ ವರ್ಷದ ಏಪ್ರಿಲ್‌ನಲ್ಲಿ ಹತ್ಯೆಯಾದರು. ವೈದ್ಯಕೀಯ ತಪಾಸಣೆಗೆಂದು ಪ್ರಯಾಗ್‌ರಾಜ್‌ಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪತ್ರಕರ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಹತ್ಯೆಯ ವೇಳೆ ಅವರು ಪೊಲೀಸರ ವಶದಲ್ಲೇ ಇದ್ದರು. ಘಟನೆಗೂ ಕೆಲ ದಿನಗಳ ಮುನ್ನ ಅತೀಕ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಇದನ್ನೂ ಓದಿ: ಕೇಂದ್ರದ ಆದೇಶವನ್ನು ಪಾಲಿಸಿ – ಟ್ವಿಟ್ಟರ್ ಅರ್ಜಿ ವಜಾ, 50 ಲಕ್ಷ ದಂಡ
Web Stories