ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಗಳಿಸುವುದರ ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯ ರಾಜಕೀಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಬಳಿಕ ಮತ್ತೆ ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರಿದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.
Advertisement
ಈ ಹಿಂದೆ ಉತ್ತರ ಪ್ರದೇಶದಲ್ಲಿ ನಾಲ್ವರು ಮುಖ್ಯಮಂತ್ರಿಗಳು ಅಧಿಕಾರಕ್ಕೆ ಮರಳಿ ಪಡೆದಿದ್ದರು. ಆದರೆ ಅವರಲ್ಲಿ ಯಾರೂ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿರಲಿಲ್ಲ. 1985ರಲ್ಲಿ ನಾರಾಯಣ್ ದತ್ ತಿವಾರಿ ಅವರು ಸತತವಾಗಿ ಗೆದ್ದ ಉತ್ತರ ಪ್ರದೇಶದ (ಅವಿಭಜಿತ) ಕೊನೆಯ ಮುಖ್ಯಮಂತ್ರಿಯಾಗಿದ್ದರು. ಇದಾದ 37 ವರ್ಷಗಳ ನಂತರ ಯೋಗಿ ಆದಿತ್ಯನಾಥ್ 5 ವರ್ಷಗಳ ಅಧಿಕಾರವನ್ನು ಉಳಿಸಿಕೊಂಡ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಇದನ್ನೂ ಓದಿ: ಮಹಿಳೆಯರು ಬಿಜೆಪಿಗೆ, ಪುರುಷರು ಎಸ್ಪಿಗೆ ಮತಹಾಕಿರಬೇಕು: ಚಂದ್ರಕಾಂತ್ ಪಾಟೀಲ್
Advertisement
Advertisement
1957 ರಲ್ಲಿ ಸಂಪೂರ್ಣಾನಂದ, 1962 ರಲ್ಲಿ ಚಂದ್ರಭಾನು ಗುಪ್ತಾ ಮತ್ತು 1974 ರಲ್ಲಿ ಹೇಮಾವತಿ ನಂದನ್ ಬಹುಗುಣ (ಲೋಕಸಭಾ ಸಂಸದೆ ರೀಟಾ ಬಹುಗುಣ ಜೋಶಿ ಅವರ ತಂದೆ) ಅನುಕ್ರಮವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ 5 ವರ್ಷಗಳ ಕಾಲ ಪೂರೈಸಿದ್ದರು. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆಯಲ್ಲಿ ವಿರೋಧ ಪಕ್ಷ ಧೂಳಿಪಟ: ಬೊಮ್ಮಾಯಿ
Advertisement
ಇದೀಗ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡು ಮತ್ತೆ ಅಧಿಕಾರವನ್ನು ಮರಳಿ ಪಡೆಯುತ್ತಿರುವ ಮೊದಲ ಮುಖ್ಯಮಂತ್ರಿಯಾಗಿದ್ದಾರೆ ಮತ್ತು ಐದು ವರ್ಷಗಳ ಪೂರ್ಣ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ರಾಜ್ಯದ ಮೂರನೇ ಮುಖ್ಯಮಂತ್ರಿಯಾಗಿದ್ದಾರೆ. ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ (2007-12) ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ (2012-17) ಅವರು ಅಧಿಕಾರವನ್ನು ಪೂರ್ಣವಾಗೊಳಿಸಿದ್ದರು.