ಲಕ್ನೋ: ಫೈಜಾಬಾದ್ ನಗರವನ್ನು ಅಯೋಧ್ಯಾ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ ಜಿಲ್ಲೆಯಲ್ಲಿ ಮದ್ಯ ಹಾಗೂ ಮಾಂಸಹಾರ ಮಾರಾಟವನ್ನು ನಿಷೇಧ ಮಾಡಲು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಚಿಂತನೆ ನಡೆಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಸ್ಥಳೀಯ ಶ್ರೀಗಳಿಂದ ಜಿಲ್ಲೆಯಲ್ಲಿ ಮದ್ಯ ಹಾಗೂ ಮಾಂಸಹಾರ ನಿಷೇಧ ಮಾಡುವಂತೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಸರ್ಕಾರದ ಈ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉತ್ತರ ಪ್ರದೇಶ ಸರ್ಕಾರದ ವಕ್ತಾರ ಶ್ರೀಕಾಂತ್ ಶರ್ಮಾ, ಸ್ಥಳೀಯ ಶ್ರೀಗಳು ಸರ್ಕಾರ ಮುಂದಿಟ್ಟಿರುವ ಬೇಡಿಕೆ ಬಗ್ಗೆ ನಮಗೆ ಅರಿವಿದೆ. ಸರ್ಕಾರ ಕಾನೂನಾತ್ಮಕವಾಗಿ ಮದ್ಯ ಹಾಗೂ ಮಾಂಸಮಾರಾಟ ನಿಷೇಧ ಮಾಡಲಿದೆ ಎಂದು ತಿಳಿಸಿದ್ದಾರೆ.
ಅಯೋಧ್ಯಾ ನಗರ ಧಾರ್ಮಿಕ ಕೇಂದ್ರವಾಗಿದ್ದು, ಇಂತಹ ನಗರದಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ಮಾಡಬಾರದು. ಇವುಗಳನ್ನು ನಿಷೇಧ ಮಾಡುವುದು ನಗರದ ಜನತೆಗೆ ಆರೋಗ್ಯಕರ ಜೀವನ ಶೈಲಿ ಮಾಡಲು ಕಾರಣವಾಗಲಿದೆ. ಇದರಿಂದ ನಗರದ ಸ್ವಚ್ಛತೆ ಹೆಚ್ಚಾಗಲಿದ್ದು, ಮಾಲಿನ್ಯ ಕಡಿಮೆ ಮಾಡಿ ಶುದ್ಧತೆಯ ಭಾವನೆ ಮೂಡಿಸುತ್ತದೆ ಎಂದು ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ಸತ್ಯೇಂದ್ರ ದಾಸ್ ಅವರ ಹೇಳಿಕೆಗೆ ಹಲವು ಶ್ರೀಗಳು ತಮ್ಮ ಸಹಮತಿಯನ್ನು ವ್ಯಕ್ತಪಡಿಸಿದ್ದು, ಇಡೀ ಜಿಲ್ಲೆಗೆ ಅನ್ವಯ ಆಗುವಂತೆ ಇದನ್ನು ನಿಷೇಧ ಮಾಡಬೇಕು ಎಂದಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಾಬ್ರಿ ಮಸೀದಿ ಪ್ರಕರಣದ ಅರ್ಜಿದಾರರಲ್ಲಿ ಒಬ್ಬರಾದ ಮೊಹಮ್ಮದ್ ಇಕ್ಭಾಲ್ ಅನ್ಸಾರಿ ಅವರು ಈ ಕುರಿತು ರಾಜ್ಯ ಸರ್ಕಾರವೇ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಆಯೋಧ್ಯಾನಗರದಲ್ಲಿ ಮದ್ಯ ಮತ್ತು ಮಾಂಸಹಾರ ಮಾರಾಟ ನಿಷೇಧ ಕ್ರಮದ ಕುರಿತು ಸಾರ್ವಜನಿಕರ ವಲಯದಿಂದ ಮಿಶ್ರಾ ಪ್ರತಿಕ್ರಿಯೆ ಕೇಳಿಬಂದಿದ್ದು, ಎರಡು ಉದ್ಯಮಗಳಲ್ಲಿ ತೊಡಗಿರುವವರು ಸರ್ಕಾರ ಚಿಂತನೆ ತಪ್ಪು. ಈಗಾಗಲೇ ನಗರದಲ್ಲಿ 200 ರಿಂದ 250 ಮಾಂಸ ಮಾರಾಟ ಮಳಿಗೆಗಳಿದ್ದು, ಕೇವಲ ಹೆಸರು ಬದಲಿಸಿದ ಮಾತ್ರಕ್ಕೆ ಇಂತಹ ನಿರ್ಧಾರ ಮಾಡುವುದು ಉತ್ತಮವಲ್ಲ. ಇದರಿಂದ ನಮ್ಮಂತಹ ಕುಟುಂಬಗಳು ಆದಾಯವನ್ನು ಕಳೆದುಕೊಳ್ಳಲಿದೆ. ಸರ್ಕಾರ ಈ ನಿರ್ಧಾರ ಕೈಗೊಂಡರೆ ನಮಗೇ ಸೂಕ್ತ ಉದ್ಯೋಗ ನೀಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews