ಲಕ್ನೋ: ಹಿಂದಿನ ಸರ್ಕಾರವೇ ಇಲ್ಲಿನ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಮುಖ್ಯ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ 119ನೇ ಜನ್ಮ ದಿನದ ಅಂಗವಾಗಿ ಆಯೋಜಿಸಲಾದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೃಷಿ ಕ್ಷೇತ್ರಗಳ ಮೂಲಕ ದೇಶವು ಸಮೃದ್ಧಿ ಸಾಧಿಸಬಹುದು ಎಂಬ ನಂಬಿಕೆಯನ್ನು ಬಿಜೆಪಿ ಸರ್ಕಾರ ಎತ್ತಿ ಹಿಡಿದಿದೆ ಎಂದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ
Advertisement
Advertisement
ಹಿಂದಿನ ಸರ್ಕಾರವು ರೈತ ವಿರೋಧಿ ಧೋರಣೆ ಹಾಗೂ ಅವೈಜ್ಞಾನಿಕ ನೀತಿಗಳು ರೈತರನ್ನು ಆತ್ಮಹತ್ಯೆಗೆ ಪ್ರೇರೇಪಿಸಿವೆ. ಅವರಲ್ಲಿ ಹೆಚ್ಚಿನವರು ಕೃಷಿಯಿಂದಲೇ ದೂರ ಉಳಿದಿದ್ದಾರೆ. ಆದರೆ ಬಿಜೆಪಿ ಸರ್ಕಾರ ಉತ್ತರ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬಂದ ಮೇಲೆ ರೈತರ 36,000 ಕೋಟಿ ರೂ. ಸಾಲವನ್ನು ಮನ್ನಾ ಮಾಡಿದ್ದೇವೆ ಎಂದು ಹೇಳಿದರು.
Advertisement
ಮಾಜಿ ಪ್ರಧಾನಿ ಚರಣ್ ಸಿಂಗ್ ಅವರ ಕನಸನ್ನು ಈಡೇರಿಸಲು ಬಿಜೆಪಿ ಸರ್ಕಾರದಿಂದ ಸಾಧ್ಯ. ಸರ್ಕಾರವು ರೈತರ ಉತ್ಪನ್ನವನ್ನು ನೇರವಾಗಿ ಖರೀದಿಸುವುದರಿಂದ ರೈತರು ಹಾಗೂ ಖರೀದಿದಾರರ ನಡುವಿನ ಮಧ್ಯವರ್ತಿಗಳ ಪಾತ್ರವನ್ನು ನಮ್ಮ ಸರ್ಕಾರ ತೆಗೆದುಹಾಕಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದಾಗ ಸಿಎಂ ಬದಲಾವಣೆ ಅನ್ನೋದು ಅಂಟು ರೋಗ: ರಾಜೂಗೌಡ
Advertisement