ಕನ್ನಡದಲ್ಲಿ ಮಾತನಾಡಿ ಮಂಡ್ಯ ಜನರ ಮನ ಗೆದ್ದ ಯೋಗಿ

Public TV
1 Min Read
Yogi Adityanath 4

ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಬಿಜೆಪಿಯ ಘಟಾನುಘಟಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಾ, ಮತದಾರನ್ನ ಸೆಳೆಯಲು ನಾನಾ ತಂತ್ರಗಾರಿಗೆ ಹೆಣೆಯುತ್ತಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರೂ ಬುಧವಾರ ಕರ್ನಾಟಕಕ್ಕೆ ಆಗಮಿಸಿದ್ದು, ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ (Mandya) ಜಿಲ್ಲೆಯಲ್ಲಿ ಬಿಜೆಪಿ (BJP) ಪರವಾಗಿ ಪ್ರಚಾರ ಕಾರ್ಯಕ್ರಮ ನಡೆಸಿದ್ದಾರೆ. ಮಂಡ್ಯಕ್ಕೆ ಬರುತ್ತಿದ್ದಂತೆ ಅದ್ಧೂರಿ ರೋಡ್ ಶೋ (YogiAdityanath RoadShow) ನಡೆಸಿದ ಯುಪಿ ಸಿಎಂ, ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಮಾತನಾಡಿ ಮಂಡ್ಯ ಜನರ ಮನಗೆದ್ದಿದ್ದಾರೆ.

Yogi Adityanath 1 1

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಹ ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲಾ ಪ್ರತೀ ಕಾರ್ಯಕ್ರಮದಲ್ಲೂ `ಕರ್ನಾಟಕದ ಜನತೆಗೆ ನನ್ನ ನಮಸ್ಕಾರಗಳು’ ಎಂದು ಹೇಳುವ ಮೂಲಕ ಕನ್ನಡದಲ್ಲೇ ಭಾಷಣ ಆರಂಭಿಸುತ್ತಾರೆ. ಅದರಂತೆ ಯೋಗಿ ಆದಿತ್ಯನಾಥ್ ಅವರೂ ಕನ್ನಡದಲ್ಲಿ ಭಾಷಣ ಆರಂಭಿಸಿದ್ದಾರೆ. ಇದನ್ನೂ ಓದಿ: ದೊಡ್ಡಗೌಡರ ಕೋಟೆಗೆ ಇಂದು ಯುಪಿ ಸಿಎಂ ಎಂಟ್ರಿ – ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

BASAVARAJ BOMMAI AND YOGI ADITHYANATH

ಮಂಡ್ಯದಲ್ಲಿಂದು ನಡೆದ ವೇದಿಕೆ ಕಾರ್ಯಕ್ರಮದಲ್ಲಿ `ಸಕ್ಕರೆಯ ನಾಡು ಮಂಡ್ಯದ ಜನತೆಗೆ ನನ್ನ ನಮಸ್ಕಾರಗಳು, ಆದಿಚುಂಚನಗಿರಿ ಮಠಕ್ಕೆ ನನ್ನ ಭಕ್ತಿ ಪೂರ್ವಕ ನಮಸ್ಕಾರಗಳು’ ಎಂದು ವಿನಮ್ರವಾಗಿ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರ ಬಾಯಲ್ಲಿ ಕನ್ನಡ ನುಡಿ ಕೇಳಿ ಮಂಡ್ಯದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: JDS ಭದ್ರಕೋಟೆಯಲ್ಲಿ ಯೋಗಿ ಆದಿತ್ಯನಾಥ್ ರೋಡ್ ಶೋ

ಜಯ ಭಾರತ ಜನನಿಯ ತನುಜಾತೆ.. ಜಯಹೇ ಕರ್ನಾಟಕ ಮಾತೆ ಎಂದು ಕುವೆಂಪು ಅವರ ನಾಡಗೀತೆಯನ್ನು ಯೋಗಿ ಹಾಡಿದರು. ಅಲ್ಲದೇ, ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲ ಈ ಬಾರಿ ಗೆಲ್ಲಿಸಬೇಕು ಎಂದು ಕನ್ನಡದಲ್ಲೇ ನಾಡಿನ ಜನತೆಗೆ ಮನವಿ ಮಾಡಿದರು.

Share This Article