ಮಂಡ್ಯ: ವಿಧಾನಸಭಾ ಚುನಾವಣೆ (Assembly election) ಹಿನ್ನೆಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಬುಧವಾರ ಕರ್ನಾಟಕಕ್ಕೆ (Karnataka)ಆಗಮಿಸಿದ್ದು, ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ (Mandya) ಜಿಲ್ಲೆಯಲ್ಲಿ ಬಿಜೆಪಿ (BJP) ಪರವಾಗಿ ಪ್ರಚಾರ ಕಾರ್ಯಕ್ರಮ ಆರಂಭಿಸಿದ್ದಾರೆ. ಮಂಡ್ಯದ ಪಿಇಎಸ್ ಹೆಲಿಪ್ಯಾಡ್‌ಗೆ ಆಗಮಿಸಿದ ಯೋಗಿ ಸಂಜಯ್ ವೃತ್ತದಿಂದ ರೋಡ್ ಶೋ (Road Show) ನಡೆಸಿದರು.
Advertisement
ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಆಗಮಿಸಿರುವ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ಮುಖಂಡರು ಸ್ವಾಗತಿಸಿದರು. ಯೋಗಿ ಅವರನ್ನು ಸಚಿವ ಅಶ್ವಥ್ ನಾರಾಯಣ್, ಸಂಸದ ಪ್ರತಾಪ್ ಸಿಂಹ ಹಾಗೂ ಸಂಸದೆ ಸುಮಲತಾ ಬರಮಾಡಿಕೊಂಡರು.
Advertisement
Advertisement
ಯೋಗಿ ಆಗಮಿಸುತ್ತಲೇ ಅವರ ಪರ ಜಯಘೋಷ ಮುಗಿಲು ಮುಟ್ಟಿತು. ವಿವಿಧ ಕಲಾತಂಡಗಳು, ಪೂರ್ಣಕುಂಭದ ಮೂಲಕ ಸ್ವಾಗತ ಕೋರಿದವು. ಜನರು ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಸೇರಿದ್ದರು. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಯೋಗಿ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಇದನ್ನೂ ಓದಿ: ಮೈಲಾರಿ ಹೋಟೆಲ್‌ನಲ್ಲಿ ತಾನೇ ದೋಸೆ ಹಾಕಿ ರುಚಿಗೆ ಫಿದಾ ಆದ ಪ್ರಿಯಾಂಕಾ ಗಾಂಧಿ
Advertisement
ಸಂಜಯ್ ವೃತ್ತದಿಂದ ಯೋಗಿ ರೋಡ್ ಶೋ ಆರಂಭಿಸಿ, ತೆರದ ವಾಹನದಲ್ಲಿ ನಿಂತು ಜನರತ್ತ ಕೈ ಬೀಸಿದರು. ಅಶ್ವಥ್ ನಾರಾಯಣ್, ಪ್ರತಾಪ್ ಸಿಂಹ ಸುಮಲತಾ ಅಂಬರೀಶ್, ಮಂಡ್ಯ ಜಿಲ್ಲೆಯ 7 ಕ್ಷೇತ್ರದ ಅಭ್ಯರ್ಥಿಗಳು ಯೋಗಿಗೆ ಸಾಥ್ ನೀಡಿದರು. ರೋಡ್ ಶೋ ಮಹಾವೀರ ವೃತ್ತದವರೆ ಸುಮಾರು 800ಮೀ. ಸಾಗಿ ಕೊನೆಗೊಂಡಿತು. ರೋಡ್ ಶೋ ವೇಳೆ ಜನ ಕಿಕ್ಕಿರಿದು ಸೇರಿದ್ದರು. ಇದನ್ನೂ ಓದಿ: ಆಪರೇಷನ್ ಕಾವೇರಿ- 135 ಮಂದಿ ಭಾರತೀಯರಿದ್ದ 3ನೇ ತಂಡ ಸೌದಿಗೆ ರೀಚ್