ಲಕ್ನೋ: ಅಕ್ಟೋಬರ್ 24ರಂದು ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಗೆದ್ದ ಪಾಕಿಸ್ತಾನದ ಗೆಲುವನ್ನು ಆಚರಿಸುವವರ ವಿರುದ್ಧ ದೇಶದ್ರೋಹದ ಆರೋಪವನ್ನು ಎದುರಿಸಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸುದ್ದಿ ಪ್ರಕಟಣ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯೋಗಿ ಆದಿತ್ಯನಾಥ್ ಈ ಹೇಳಿಕೆಯನ್ನು ನೀಡಿದ್ದು, ಆ ಸಂದರ್ಶನದ ಲಿಂಕ್ ಅನ್ನು ಯೋಗಿ ಆದಿತ್ಯನಾಥ್ ಅವರ ಕಚೇರಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಇದನ್ನೂ ಓದಿ: ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
Advertisement
Advertisement
ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದ ಬಳಿಕ ದೇಶ ವಿರೋಧಿ ಘೋಷಣೆ ಕೂಗಿದ್ದಕ್ಕಾಗಿ ಆಗ್ರಾದಲ್ಲಿ ಕಾಶ್ಮೀರಿ ಮೂಲದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬಂಧಿಸಿದ ನಂತರ ಯೋಗಿ ಆದಿತ್ಯನಾಥ್ ಅವರು ಈ ಹೇಳಿಕೆ ನೀಡಿದ್ದಾರೆ.
Advertisement
Advertisement
ಸ್ಥಳೀಯ ಬಿಜೆಪಿ ಮುಖಂಡರು ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಕಾಲೇಜಿನ ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ ಮತ್ತು ವಿದ್ಯಾರ್ಥಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)ಬಿ, 153ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಹಿಂದೂ ಸಂಘನೆಗಳ ಹಲವಾರು ಕಾರ್ಯಕರ್ತರು ಕಾಲೇಜ್ ಕ್ಯಾಂಪಸ್‍ಗೆ ನುಗ್ಗಿ ವಿದ್ಯಾರ್ಥಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ಕಾಲೇಜಿನ ಅಧ್ಯಾಪಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೆಲಸ ಕೊಡಿಸುತ್ತೇವೆಂದು 400 ಮಂದಿಗೆ ಕೋಟಿ ಕೋಟಿ ವಂಚನೆ: ಇಬ್ಬರು ಅರೆಸ್ಟ್
ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆಯನ್ನು ಕೂಗುತ್ತಿರುವುದು ಮತ್ತು ಪಾಕಿಸ್ತಾನದ ಗೆಲುವನ್ನು ಆಚರಿಸುತ್ತಿರುವ ಹಲವಾರು ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಭಾನುವಾರ ನಡೆದ ಪಂದ್ಯದ ನಂತರ ಇಲ್ಲಿಯವರೆಗೂ ಆಗ್ರಾ, ಬರೇಲಿ, ಬದೌನ್ ಮತ್ತು ಸೀತಾಪುರ ಜಿಲ್ಲೆಯ ಏಳು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಲಾಸಿದ್ದಾರೆ.
ಇದೇ ರೀತಿ ರಾಜಸ್ಥಾನ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲೂ ಪ್ರಕರಣಗಳು ದಾಖಲಾಗಿವೆ. ಪಾಕಿಸ್ತಾನದ ವಿಜಯವನ್ನು ಆಚರಿಸಿ ವಾಟ್ಸಾಪ್‍ನಲ್ಲಿ ಸ್ಟೇಟಸ್ ಹಾಕಿದ್ದಕ್ಕಾಗಿ ರಾಜಸ್ಥಾನದ ಶಾಲಾ ಶಿಕ್ಷಕಿಯನ್ನು ಬಂಧಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದ ಕರಣ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು SKIMS ಸೌರಾದಲ್ಲಿ ಹಾಸ್ಟೆಲ್‍ಗಳಲ್ಲಿ ವಾಸಿಸುವ ಕೆಲವು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದನ್ನೂ ಓದಿ: ಮದ್ಯಕ್ಕೆ ಹತ್ತು ರೂ. ನೀಡದ್ದಕ್ಕೆ ಸ್ನೇಹಿತನನ್ನೇ ಕೊಂದ್ರು
ಮತ್ತೊಂದೆಡೆ ಪಂದ್ಯದ ನಂತರ ಪಂಜಾಬ್‍ನ ಸಂಗ್ರೂರ್ ಜಿಲ್ಲೆಯ ಎಂಜಿನಿಯರಿಂಗ್ ಇನ್‍ಸ್ಟಿಟ್ಯೂಟ್‍ನಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಗುಂಪು ಮತ್ತು ಉತ್ತರ ಪ್ರದೇಶ, ಬಿಹಾರದವರ ನಡುವೆ ಮಾರಾಮಾರಿ ನಡೆದಿದೆ.