ಕೊಪ್ಪಳ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆ ಬಿಜೆಪಿಯ (BJP) ಘಟಾನುಘಟಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಸಮರೋಪಾದಿಯಾಗಿ ಭೇಟಿ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಾ, ಮತದಾರನ್ನ ಸೆಳೆಯಲು ನಾನಾ ತಂತ್ರ ಹೆಣೆಯುತ್ತಿದ್ದಾರೆ.
ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರೂ ಭಾನುವಾರ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕೊಪ್ಪಳ (Koppal) ಜಿಲ್ಲೆಯ ಗಂಗಾವತಿಗೆ ಬರುತ್ತಿದ್ದಂತೆ ಅದ್ಧೂರಿ ರೋಡ್ ಶೋ ನಡೆಸಿದ ಯುಪಿ ಸಿಎಂ, ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಮಾತನಾಡಿ ಜನರಿಂದ ಬೇಷ್ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ಸಿದ್ಧರಿದ್ರೆ ಅವರೊಂದಿಗೆ ಓಟದ ಸ್ಪರ್ಧೆಗೆ ನಾನು ರೆಡಿ: ಸಿದ್ದರಾಮಯ್ಯ
Advertisement
Advertisement
ಪ್ರಧಾನಿ ನರೇಂದ್ರ ಮೋದಿ ಅವರು ಸಹ ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲಾ ಪ್ರತೀ ಕಾರ್ಯಕ್ರಮದಲ್ಲೂ `ಕರ್ನಾಟಕದ ಜನತೆಗೆ ನನ್ನ ನಮಸ್ಕಾರಗಳು ಎಂದು ಹೇಳುವ ಮೂಲಕ ಕನ್ನಡದಲ್ಲೇ ಭಾಷಣ ಆರಂಭಿಸುತ್ತಾರೆ. ಅದರಂತೆ ಯೋಗಿ ಆದಿತ್ಯನಾಥ್ ಅವರೂ ಕನ್ನಡದಲ್ಲಿ ಭಾಷಣ ಆರಂಭಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ Vs ಮಾಜಿ ಪ್ರಧಾನಿ; ಮೋದಿ ಬರುವ ದಿನವೇ ಮಗನ ಪರ ಅಖಾಡಕ್ಕಿಳಿದ ದೊಡ್ಡಗೌಡ್ರು
Advertisement
Advertisement
ಕಳೆದ ವಾರ ಮಂಡ್ಯಕ್ಕೆ ಭೇಟಿ ನೀಡಿದ್ದಾಗ, ಕಾರ್ಯಕ್ರಮದಲ್ಲಿ `ಸಕ್ಕರೆಯ ನಾಡು ಮಂಡ್ಯದ ಜನತೆಗೆ ನನ್ನ ನಮಸ್ಕಾರಗಳು, ಆದಿಚುಂಚನಗಿರಿ ಮಠಕ್ಕೆ ನನ್ನ ಭಕ್ತಿ ಪೂರ್ವಕ ನಮಸ್ಕಾರಗಳು’ ಎಂದು ವಿನಮ್ರವಾಗಿ ಹೇಳಿದ್ದರು. ನಂತರ ಜಯ ಭಾರತ ಜನನಿಯ ತನುಜಾತೆ.. ಜಯಹೇ ಕರ್ನಾಟಕ ಮಾತೆ ಎಂದು ಕುವೆಂಪು ಅವರ ನಾಡಗೀತೆಯನ್ನು ಯೋಗಿ ಹಾಡಿದ್ದರು. ಅಲ್ಲದೇ, ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲ ಈ ಬಾರಿ ಗೆಲ್ಲಿಸಬೇಕು ಎಂದು ಕನ್ನಡದಲ್ಲೇ ನಾಡಿನ ಜನತೆಗೆ ಮನವಿ ಮಾಡಿದ್ದರು.
ಭಾನುವಾರ ಗಂಗಾವತಿಯಲ್ಲಿ ಶಾಸಕ ಪರಣ್ಣ ಮುನವಳ್ಳಿ ಪರ ಅಬ್ಬರದ ಪ್ರಚಾರ ನಡೆಸಿದ ಯೋಗಿ ಆದಿತ್ಯನಾಥ್, `ಆಂಜನೇಯ ನಾಡಿನ ಜನತೆಗೆ ನನ್ನ ನಮಸ್ಕಾರಗಳು’ ಎಂದು ಹೇಳುವ ಮೂಲಕ ಕನ್ನಡದಲ್ಲೇ ಭಾಷಣ ಮಾಡಿದ್ದಾರೆ. ಇದಕ್ಕೂ ಮುನ್ನ ವೇದಿಕೆ ಮೇಲೆಯೇ ಕುಳಿತು ಮೋದಿ ಅವರ 100ನೇ `ಮನ್ ಕಿ ಬಾತ್’ ಕೇಳಿದ್ದಾರೆ.