ಮಾರ್ಚ್ 25ಕ್ಕೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ- ಪ್ರಧಾನಿ ಭಾಗಿ

Public TV
1 Min Read
MODI_ YOGI

ಲಕ್ನೋ: ಉತ್ತರ ಪ್ರದೇಶದಲ್ಲಿ ಎರಡನೇ ಅವಧಿಗೆ ಯೋಗಿ ಆದಿತ್ಯನಾಥ್ ಮಾರ್ಚ್ 25ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ.

ಪ್ರಮಾಣ ವಚನ ಸಮಾರಂಭವೂ ಮಾರ್ಚ್ 25ರಂದು ಸಂಜೆ 4 ಗಂಟೆಗೆ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಕ್ರೀಡಾಂಗಣವು 50,000 ಪ್ರೇಕ್ಷಕರು ವೀಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 200 ವಿವಿಐಪಿಗಳಿಗೆ ವ್ಯವಸ್ಥೆ ಮಾಡಲಾಗುತ್ತಿದೆ.

BJP FLAG

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿಪಕ್ಷಗಳು ಸೇರಿದಂತೆ ಇತರ ಪ್ರಮುಖ ನಾಯಕರು ಕಾರ್ಯಕ್ರಮಕ್ಕೆ ಹಾಜರಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡ್ತೀವಿ: ಗುಲಾಂ ನಬಿ ಅಜಾದ್

ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಪಕ್ಷ ಮುಂದಾಗಿತ್ತು, ಈಗಾಗಲೇ ಆಹ್ವಾನಿತರ ಪಟ್ಟಿಯನ್ನು ಸಿದ್ಧಪಡಿಸಿದೆ.

yogi 2

403 ಸದಸ್ಯರ ವಿಧಾನಸಭೆಯಲ್ಲಿ 255 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 1987 ರಿಂದೀಚೆಗೆ ತನ್ನ ಮೊದಲ ಅವಧಿಯನ್ನು ಪೂರ್ಣಗೊಳಿಸಿ ಪುನರಾಯ್ಕೆಯಾದ ಬಿಜೆಪಿ ಉತ್ತರಪ್ರದೇಶದ ಮೊದಲ ಸರ್ಕಾರವಾಗಿ ಇತಿಹಾಸವನ್ನು ಸೃಷ್ಟಿಸಿತು. ಎಸ್‍ಪಿ ನೇತೃತ್ವದ ಮೈತ್ರಿಕೂಟವು 125 ಸ್ಥಾನಗಳನ್ನು ಗೆದ್ದುಕೊಂಡಿತು. ಇದನ್ನೂ ಓದಿ: ಗೋವಾದಲ್ಲಿ ಬಿಜೆಪಿ ಸರ್ಕಾರ ರಚಿಸದಂತೆ ಎಲ್ಲಾ ಪ್ರಯತ್ನಕ್ಕೂ ಸಿದ್ಧ: ಕಾಂಗ್ರೆಸ್

Share This Article
Leave a Comment

Leave a Reply

Your email address will not be published. Required fields are marked *