ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ನೆಲಮಂಗಲಕ್ಕೆ ಭೇಟಿ ನೀಡಲಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿಯಿಂದ ನಿರ್ಮಿತವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರದ ಕ್ಷೇಮಾವನವನ್ನು ಯೋಗಿ ಆದಿತ್ಯನಾಥ್ ಅವರು ಉದ್ಘಾಟನೆ ಮಾಡಲಿದ್ದಾರೆ. ಯೋಗಿ ಆಗಮನ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವರ ಮನೆಯಲ್ಲಿ ಗಣೇಶನಿಗೆ ಆರತಿ ಮಾಡಿದ ಮೋದಿ
Advertisement
Advertisement
ಮಳೆ ಸಮಸ್ಯೆಯಾದರೆ ಬೆಂಗಳೂರಿನಿಂದ ಮಹದೇವಪುರಕ್ಕೆ ಯೋಗಿ ಕಾರಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಈಗಾಗಲೇ ನೆಲಮಂಗಲದ ಬಾವಿಕೆರೆ ಬಳಿ ಎರಡು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಯೋಗಿ ಭದ್ರತೆಗಾಗಿ 1 ಎಸ್‍ಪಿ, 1 ಎಎಸ್‍ಪಿ, 6 ಡಿವೈಎಸ್‍ಪಿ, 20 ಸಿಪಿಐ, 50 ಪಿಎಸ್‍ಐ, 600 ಪೊಲೀಸ್ ಸಿಬ್ಬಂದಿ, 1 ಕೆಎಸ್‍ಆರ್‌ಪಿ ತುಕಡಿ, ಹಾಗೂ 2 ಡಿಎಆರ್ ತುಕಡಿ ನಿಯೋಜಿಸಲಾಗಿದೆ.
Advertisement
Advertisement
ಮತ್ತೊಂದೆಡೆ ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಹೀಗಾಗಿ ಮಂಗಳೂರು ನಗರ ಹೊರವಲಯದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ. ಇದನ್ನೂ ಓದಿ: 28 ವರ್ಷ ಪಾಕ್ ಜೈಲಿನಲ್ಲಿದ್ದ ವ್ಯಕ್ತಿ ವಾಪಸ್ – ಭಾರತೀಯರ ಕರಾಳ ಸ್ಥಿತಿ ನೆನಪಿಸಿ ಕಣ್ಣೀರು
ಕಾರ್ಯಕ್ರದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 25 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದೆ. ನಾಳೆ ಮಧ್ಯಾಹ್ನ 12:55ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್‌ಪೋರ್ಟ್‌ಗೆ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎನ್.ಎಂ.ಪಿ.ಎ ಹೆಲಿಪ್ಯಾಡ್‍ಗೆ ಬಂದು ಬಳಿಕ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ.
ಇಂದಿರಾ ಗಾಂಧಿ ಬಳಿಕ 40 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ಮಂಗಳೂರಿನಲ್ಲಿ ನಡೆಯುತ್ತಿರುವ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಎನ್‍ಎಂಪಿಟಿ, ಎಂಆರ್‌ಪಿಎಲ್, ರಾಜ್ಯ ಮೀನುಗಾರಿಕೆ ಇಲಾಖೆಯ ಯೋಜನೆಯ ಶಿಲಾನ್ಯಾಸ, ಲೋಕಾರ್ಪಣೆಯನ್ನು ಪ್ರಧಾನಿ ಮಾಡಲಿದ್ದಾರೆ. ಈ ಎಸ್.ಪಿ.ಜಿ ಅಧಿಕಾರಿಗಳು ಮೂರು ದಿನಗಳಿಂದ ಮಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಮಾವೇಶಕ್ಕೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯಕರ್ತರನ್ನು ಕರೆತರಲು 1461 ಬಸ್, 200 ಟಿಟಿ ಬುಕ್ಕಿಂಗ್ ಮಾಡಲಾಗಿದೆ.