LatestMain PostNational

ಮಹಿಳೆಯರ ಸುರಕ್ಷತೆಗೆ ಏನು ಮಾಡದ ಯೋಗಿ ತೀರ್ಥಯಾತ್ರೆಗೆ ಹೊರಡಲಿ: ಜಯಾ ಬಚ್ಚನ್

ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಲ್ಲಾ ಬಿಟ್ಟು ತೀರ್ಥಯಾತ್ರೆಗೆ ಹೊರಡಲಿ. ಮಹಿಳೆಯರ ಸುರಕ್ಷತೆ, ಅಭಿವೃದ್ಧಿ ಬಗ್ಗೆ ಏನೂ ಮಾಡಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ವಾಗ್ಧಾಳಿ ಮಾಡಿದ್ದಾರೆ.

ಉತ್ತರ ಪ್ರದೇಶ ಚುನಾವಣೆ ಪ್ರಯುಕ್ತ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿ, ಉತ್ತರ ಪ್ರದೇಶದ ಹೆಣ್ಣು ಮಕ್ಕಳ ನೋವನ್ನು ಅರ್ಥ ಮಾಡಿಕೊಳ್ಳುವಲ್ಲಿ ಮುಖ್ಯಮಂತ್ರಿ ವಿಫಲರಾಗಿದ್ದಾರೆ.ಅವರು ತೀರ್ಥಯಾತ್ರೆಗೆ ಹೋಗುವುದು ಉತ್ತಮ ಎಂದು ವ್ಯಂಗ್ಯವಾಡಿದ್ದಾರೆ.

ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಅವರ ಅಭಿವೃದ್ಧಿ ಬಗ್ಗೆ ಕೇವಲ ಮಾತಿನಲ್ಲಿ ಮನೆ ಕಟ್ಟುವ ಬಿಜೆಪಿ ನಾಯಕರು, ಆ ಪಕ್ಷದ ಒಬ್ಬರೇ ಒಬ್ಬ ಸಂಸದರು ಸಂಸತ್ತಿನಲ್ಲಿ ಚರ್ಚೆ ಮಾಡಿಲ್ಲ. ಯೋಗಿ ಆದಿತ್ಯನಾಥ ಅವರ ಸರ್ಕಾರ ಅವಧಿಯಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಎನ್‍ಸಿಆರ್‌ಬಿ(National Crime Records Bureau) ಹೇಳಿದೆ. ಇದು ನಾಚೆಕೆಗೇಡಿನ ವಿಚಾರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್

ಬ್ರಿಟಿಷರು ಭಾರತಕ್ಕೆ ಬಂದು ಇಲ್ಲಿನ ಸಂಪತ್ತು ದೋಚಿ ಹೋಗಿದ್ದಾರೆ. ಆದರೆ ಇದೀಗ ಅಧಿಕಾರ ನಡೆಸುವವರು ಬ್ರಿಟಿಷರ ಮತ್ತೊಂದು ರೂಪವಾಗಿದ್ದಾರೆ ಎಂದು ಉತ್ತರ ಪ್ರದೇಶ ಆಡಳಿತ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಕಟ್ಟ ಕಡೆಯ ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆತರುವ ತನಕ ಆಪರೇಷನ್ ನಿಲ್ಲದು: ಆರ್.ಅಶೋಕ್

Leave a Reply

Your email address will not be published.

Back to top button