ರಾಮನಗರ: ಉತ್ತರ ಪ್ರದೇಶದಲ್ಲಿ ಶ್ರೀರಾಮ ಸೇನೆ (Sri Ram Sena) ಬ್ಯಾನ್ ಮಾಡಿದ್ದು ಯಾಕೆಂದು ಯೋಗಿ (Yogi Adityanath) ಹೇಳಬೇಕು ಎಂದು ಕಾಂಗ್ರೆಸ್ (Congress) ನಾಯಕ ಡಿ.ಕೆ ಸುರೇಶ್ (D.K. Suresh) ಕಿಡಿಕಾರಿದ್ದಾರೆ.
ಕನಕಪುರದಲ್ಲಿ (Kanakapur) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ (BJP) ಆಡಳಿತದ ಮೂರು ರಾಜ್ಯಗಳಲ್ಲಿ ಶ್ರೀರಾಮ ಸೇನೆ ಬ್ಯಾನ್ ಆಗಿದೆ. ಯಾಕೆ ಬ್ಯಾನ್ ಮಾಡಿದ್ದಾರೆ ಎಂದು ಬಿಜೆಪಿಗರು ಹೇಳಬೇಕು. ಚುನಾವಣೆ ಹೊಸ್ತಿಲಲ್ಲಿ ಗೆಲ್ಲಲು ಆಗದೆ ಧರ್ಮದ ಹೆಸರಿನಲ್ಲಿ ಅಡ್ಡ ಬರುತ್ತಿರುವುದು ಒಳ್ಳೆಯದಲ್ಲ. ನಾವು ಸಹ ಹಿಂದೂಗಳು, ಹಿಂದುತ್ವದ ಬಗ್ಗೆ ಬಿಜೆಪಿಯಿಂದ ಸಲಹೆ ಪಡೆಯಬೇಕಾಗಿಲ್ಲ. ನಾವೂ ದೇವಸ್ಥಾನಕ್ಕೆ ಹೋಗಿ ದೇವರ ಪೂಜೆ ಮಾಡುತ್ತೇವೆ. ಆದರೆ ಚುನಾವಣಾ ಪ್ರಚಾರದಲ್ಲಿ ರಾಮ ಮತ್ತು ಹನುಮನ ತಂದು ಪೂಜೆ ಮಾಡುವುದಿಲ್ಲ. ವೋಟಿಗಾಗಿ ಪೂಜೆ ಮಾಡುವವರಿಗೆ ಜನ ಉತ್ತರಿಸಲಿದ್ದಾರೆ ಎಂದರು. ಇದನ್ನೂ ಓದಿ: ಕಳೆದ ಬಾರಿ ರಾಹುಲ್ ಗಾಂಧಿ ಮಾಡಿದ್ದನ್ನು, ಈ ಬಾರಿ ಮೋದಿ ಮಾಡಿದ್ದಾರೆ: ಬೇಸರ ವ್ಯಕ್ತಪಡಿಸಿದ ಹೆಚ್‌ಡಿಡಿ
Advertisement
Advertisement
ಇನ್ನೂ ಕನಕಪುರದಲ್ಲಿ ಅಮಿತ್ ಶಾ ಪ್ರಚಾರದ ವಿಚಾರವಾಗಿ ಮಾತನಾಡಿದ ಅವರು, ಯಾರು ಬೇಕಾದರೂ ಬಂದು ಪ್ರಚಾರ ಮಾಡಲಿ. ಅಮಿತ್ ಶಾ ಬಂದರೂ ಸಂತೋಷ, ಮೋದಿ ಬಂದರೂ ಸಂತೋಷ. ಅವರಿಬ್ಬರೂ ಮೇಕೆದಾಟು ಯೋಜನೆಗೆ ಯಾವಾಗ ಅನುಮತಿ ಕೊಡುತ್ತೀರಾ? ಅದರ ಬಗ್ಗೆ ನಿಲುವು ಸ್ಪಷ್ಟಪಡಿಸಲಿ ಎಂದಿದ್ದಾರೆ.
Advertisement
Advertisement
ಕನಕಪುರದಲ್ಲಿ ಭಯದ ವಾತಾವರಣ ಇದೆ ಎಂಬ ಬಿ.ಎಲ್ ಸಂತೋಷ್ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿ.ಎಲ್ ಸಂತೋಷ್ ಅವರಿಗೆ ನಾನೇ ಎಲ್ಲಾ ರೀತಿಯ ರಕ್ಷಣೆ ನೀಡುತ್ತೇನೆ. ಅವರೇ ಮನೆಮನೆಗೆ ಬಂದು ಮತ ಕೇಳಲಿ. ನಾನು ಒಂದು ಮಾತು ಹೇಳಿದ್ರೆ ಸಾಕು ಅವರಿಗೆ ರಕ್ಷಣೆ ಸಿಗುತ್ತದೆ. ಅದಕ್ಕಾಗಿ ಬಿಎಸ್‍ಎಫ್‍ನ ಅಗತ್ಯವಿಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬಜರಂಗದಳ ನಿಷೇಧಿಸಲು ನಿಮ್ಮ ಬಳಿ ಧೈರ್ಯ, ತಾಕತ್ ಇಲ್ಲ: ಕಾಂಗ್ರೆಸ್ ವಿರುದ್ಧ ಫಡ್ನವೀಸ್ ವಾಗ್ದಾಳಿ