-“ನನ್ಮಗ್ನೆ ಮಾಡಕ್ ಕೆಲ್ಸ ಇಲ್ಲ ನಿಂಗೆ” ಸಾವನ್ನು ಮುದ್ದಾಗಿ ಗದರಿಸುವ ವ್ಯಕ್ತಿ ಅಂಬರೀಶ್
ಬೆಂಗಳೂರು: ನಟ ಅಂಬರೀಶ್ ನಿಧನಕ್ಕೆ ಸಂತಾಪ ಸೂಚಿಸಿ ನಿರ್ದೇಶಕ ಯೋಗರಾಜ್ ಭಟ್ಟರು ತಮ್ಮದೇ ಶೈಲಿಯಲ್ಲಿ ಕೆಲವು ಸಾಲುಗಳನ್ನು ಟ್ವಿಟ್ಟರ್ ಮತ್ತು ಇನ್ ಸ್ಟಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಅಂಬರೀಶ್ ಜೊತೆಗಿನ ಒಡನಾಟದ ನೆನಪುಗಳನ್ನು ಸಹ ಯೋಗರಾಜ್ ಭಟ್ಟರು ಬರೆದಿದ್ದಾರೆ.
“ತುಂಬಾ ಸಂತಸದ ಜೀವನ ಬಾಳಿದ ದೊಡ್ಡ ವ್ಯಕ್ತಿ ಹೋದಾಗ ಅದನ್ನ ಸಾವು ಅಂತ ಅನ್ನಬಾರದು, ಹುಟ್ಟು ಅನ್ನಬೇಕು. ಸಾವಲ್ಲ ಇದು ಅಂಬರೀಷ್ ಅಣ್ಣನ ಹುಟ್ಟು. ಅವರು ಎಲ್ಲೂ ಹೋಗಿಲ್ಲ, ಹೋಗೋದೂ ಇಲ್ಲ. ಸದಾಕಾಲ ನಮ್ಮೆಲ್ಲರ ಮನದಾಳದಲ್ಲಿ ಜೀವಂತವಾಗಿದ್ದು, ಮುಂದೆಯೂ ಜೀವಂತವಾಗಿಯೇ ಇರುತ್ತಾರೆ. ನನ್ನ ಪ್ರಕಾರ ಈಗ ಅವರು ಸಾವಿಗೆ ಬಯ್ಯುತ್ತಾ ಕೂತಿದ್ದಾರೆ. “ನನ್ಮಗ್ನೆ ಮಾಡಕ್ ಕೆಲ್ಸ ಇಲ್ಲ ನಿಂಗೆ” ಅಂತ ಸಾವನ್ನು ಮುದ್ದಾಗಿ ಗದರಿಸುವ ತಾಕತ್ತು ಅವರೊಬ್ಬರಿಗೇ ಇರೋದು. ಯಾರನ್ನೂ ಬಿಡದ ಸಾವಿಗೆ ಅಂಬರೀಶಣ್ಣನ ದೋಸ್ತಿ ಮಾಡೋ ಅಸೆ ಯಾಕಾದ್ರೂ ಬಂತೋ ಎಂದು ದುಃಖಭರಿತವಾಗಿ ಬರೆದಿದ್ದಾರೆ. ಇದನ್ನೂ ಓದಿ: ಅಂಬಿಯನ್ನು ಮದ್ವೆಗೆ ಒಪ್ಪಿಸಿದ್ದು ಹೇಗೆ? ಡಿಕೆ ಶಿವಕುಮಾರ್ ಹೆಳೆಯ ನೆನಪು ಮೆಲಕು
Advertisement
Advertisement
ಬೊಂಬೆ ಆಡ್ಸೋನು” ಡ್ರಾಮ ಟೈಮ್ ಅವರ ಜೊತೆ ಇದ್ದ ನೆನಪು? ಮೊನ್ನೆ ಅವರಿಗೆ ನಾನು ಮತ್ತು ರಾಕ್ ಲೈನ್ ವೆಂಕಟೇಶ್ ಹೆಡ್ ಮಸಾಜ್ ಮಾಡಿದ ನೆನಪು? ಅವರ ಕನಸಲ್ಲಿ ನಾನು ಹೋಗಿದ್ದಕ್ಕೆ ಅವರು ಕರೆದು ಬೈದ ನೆನಪು? ಯಶ್-ರಾಧಿಕಾ ಸೀಮಂತದಲ್ಲಿ ಅವರು ಜೋಕ್ ಮಾಡುತ್ತಾ ಕೂತಿದ್ದ ನೆನಪು? ಜೊತೆಗೆ ಅಸಂಖ್ಯ ನೆನಪಿನ ಚಿತ್ರಗಳು. ನೋ ವೇ, ಚಾನ್ಸೇ ಇಲ್ಲ ಅವ್ರು ಹೋಗಿಲ್ಲ. ನೆನಪಿನ ಹೂವು ಸರಪಳಿಯಲ್ಲಿ ಎಲ್ಲರನ್ನು ಬಿಗಿಯಾಗಿ ಪ್ರೇಮದಿಂದ ಬಾಚಿ ಬಂಧಿಸಿದ ಧೀಮಂತ ಆತ್ಮಕ್ಕೆ ನಾಡಿನ ನಮನ ಅಂತಾ ಬರೆದು ಸಂತಾಪ ಸೂಚಿಸಿದ್ದಾರೆ. ಇದನ್ನು ಓದಿ: ಪತ್ನಿಗೆ ಕಂಡೀಷನ್ ಹಾಕ್ತೀರಾ ಪ್ರಶ್ನೆಗೆ ಅಂಬಿಯ ಪ್ರತಿಕ್ರಿಯೆ ಹೀಗಿತ್ತು
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv