ಯತ್ನಾಳ್ ಮಾತಿನ ಪಟ್ಟಿ ಮಾಡಿಕೊಳ್ತಿದ್ದೀನಿ, ಒಂದೇ ಸಲ ಉತ್ತರ ಕೊಡ್ತೀನಿ: ವಿಜಯೇಂದ್ರ

Public TV
1 Min Read
BY Vijayendra

ಬೆಂಗಳೂರು: ಯತ್ನಾಳ್ (Basanagouda Patil Yatnal) ಏನೇನು ಮಾತನಾಡುತ್ತಿದ್ದಾರೋ ಅದನ್ನು ಪಟ್ಟಿ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲದ್ದಕ್ಕೂ ಒಂದೇ ಬಾರೀ ಉತ್ತರ ಕೊಡುತ್ತೇನೆ ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈಗ ಪಕ್ಷದಲ್ಲಿ ಕೆಲಸ ಇದೆ. ಪ್ರತಿ ದಿನ ಇದರ ಬಗ್ಗೆಯೇ ಮಾತನಾಡಲು ಆಗಲ್ಲ. ನನ್ನ ಬಗ್ಗೆ ಮಾತನಾಡಿದರೆ ನಾನೇ ಉತ್ತರ ಕೊಡುತ್ತೇನೆ ಎಂದರು. ಇದನ್ನೂ ಓದಿ: ಕರ್ನಾಟಕದ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥರಾಗಿ ಮೀನಾಕ್ಷಿ ನೇಗಿ ನೇಮಕ

ಬಸನಗೌಡ ಪಾಟೀಲ್ ಯತ್ನಾಳ್ ಏಕವಚನ ಬಳಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹಿರಿಯರು ಇದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೋ, ಇನ್ನೊಂದು ಭಾಷೆಯಲ್ಲಿ ಮಾತನಾಡಿದ್ದಾರೋ ತಲೆ ಕೆಡಿಸಿಕೊಳ್ಳಲ್ಲ. ನಮಗೆ ಪಕ್ಷದಲ್ಲಿ ಕೆಲಸ ಮಾಡಲು ಸಾಕಷ್ಟು ಇದೆ ಎಂದು ಹೇಳಿದರು. ಇದನ್ನೂ ಓದಿ: ʻಮಹಾʼ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ – ಮುಂಬೈ ಪೊಲೀಸರಿಂದ ತನಿಖೆ ಶುರು

Share This Article