ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ವಿರೋಧ ಪಕ್ಷದ ನಾಯಕರ ಯಡಿಯೂರಪ್ಪನವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ನಾವು 10 ಸಾವಿರ ಕೋಟಿ ರೂ. ಕೊಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದ್ದೇವು ಎಂದು ಸ್ಪಷ್ಟನೆ ನೀಡಿದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು, ಕಾಂಗ್ರೆಸ್ಸಿನವರು ಕೃಷ್ಣಾ ಮೇಲ್ದಂಡೆ ಯೋಜನೆಗೆ 50 ಸಾವಿರ ಕೋಟಿ ರೂ. ನೀಡುವುದಾಗಿ ಹೇಳಿದ್ದರು. ಆ ಬಗ್ಗೆ ನಾವು ದಾಖಲೆ ಸಮೇತ ಹೇಳುತ್ತೇನೆ, ಇಲ್ಲ ಅಂದ್ರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
Advertisement
Advertisement
ಬಿ.ಎಸ್.ಯಡಿಯೂರಪ್ಪ ಅವರ ಆರೋಪದಿಂದ ಗರಂ ಆದ ಸಿದ್ದರಾಮಯ್ಯ, ಆಯ್ತು ಕುಳಿತುಕೊಳ್ಳಿ ಯಡಿಯೂರಪ್ಪ ಅವರೆ, ನಿಮಗೆ ವಯಸ್ಸಾಗಿದೆ, ಕ್ಷಮೆ ಕೇಳುವುದು ಬೇಡ. ಹಿಂದಿನ ಬಿಜೆಪಿ ಸರ್ಕಾರದಲ್ಲಿ 18 ಸಾವಿರ ಕೋಟಿ ರೂ. ನೀರಾವರಿಗೆ ಖರ್ಚು ಮಾಡಿದರೆ, ನಾವು 48 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ತಿರುಗೇಟು ಕೊಟ್ಟರು.
Advertisement
ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಶಾಸಕ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವುದು ನಿಜ ಎಂದರು. ಇದರ ಬೆನ್ನಲ್ಲೇ ಪ್ರಣಾಳಿಕೆಯನ್ನು ಬಸನಗೌಡ ಪಾಟೀಲ್ ಯತ್ನಾಳ್ ಓದಿದರು. ಆಗ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಮಧ್ಯಪ್ರವೇಶಿಸಿ, ಕೃಷ್ಣಾ ಕೊಳದ ಯೋಜನೆಗಳಿಗೆ ಮಾತ್ರ 50 ಸಾವಿರ ಕೋಟಿ ರೂ. ಖರ್ಚು ಮಾಡುವ ಭರವಸೆ ಕೊಟ್ಟಿಲ್ಲ ಎಂದು ಸಮರ್ಥನೆ ಮಾಡಿಕೊಂಡರು.
Advertisement