ನವದೆಹಲಿ: ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಿ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀಕ್ಷ್ಣವಾಗಿ ತಿವಿದಿದ್ದಾರೆ.
ಶಾಸಕ ಜಿಗ್ನೇಶ್ ಮೇವಾನಿ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಈ ಕ್ರಮ ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಾಂವಿಧಾನಿಕ. ಜನಪ್ರತಿನಿಧಿಯನ್ನು ಆಯ್ಕೆ ಮಾಡಿದ ಜನತೆಗೆ ಮಾಡಿದ ಅವಮಾನ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಅಸ್ಸಾಂ ಪೊಲೀಸರಿಂದ ಗುಜರಾತ್ MLA ಜಿಗ್ನೇಶ್ ಮೇವಾನಿ ಬಂಧನ
Advertisement
Modi ji, you can try to crush dissent by abusing the state machinery.
But you can never imprison the truth.#DaroMat #SatyamevaJayate pic.twitter.com/Qw4wVhLclH
— Rahul Gandhi (@RahulGandhi) April 21, 2022
Advertisement
ಮೋದಿ ಜೀ, ನೀವು ರಾಜ್ಯ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪ್ರಯತ್ನಿಸಬಹುದು. ಆದರೆ ನೀವು ಎಂದಿಗೂ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
Advertisement
ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಯನ್ನು ಅಸ್ಸಾಂ ಪೊಲೀಸರು ಬಂಧಿಸಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ. ಜನಪ್ರತಿನಿಧಿಯನ್ನು ಆಯ್ಕೆ ಮಾಡಿದ ಜನರಿಗೆ ಮಾಡಿದ ಅವಮಾನ. ಇಂತಹ ದಬ್ಬಾಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದನಿ ಎತ್ತಬೇಕು ಎಂದು ಟ್ವೀಟ್ ಮಾಡಿ ಕರೆ ನೀಡಿದ್ದಾರೆ. ಇದನ್ನೂ ಓದಿ: 5-12 ವರ್ಷದ ಮಕ್ಕಳಿಗೂ ಶೀಘ್ರದಲ್ಲಿ ವ್ಯಾಕ್ಸಿನ್?
Advertisement
ಅಸ್ಸಾಂ ಪೊಲೀಸರು ಮಧ್ಯರಾತ್ರಿ ಜಿಗ್ನೇಶ್ ಮೇವಾನಿ ಅವರನ್ನು ಕಾನೂನುಬಾಹಿರ ಮತ್ತು ಅಸಂವಿಧಾನಿಕವಾಗಿ ಬಂಧಿಸಿರುವುದು ಬಿಜೆಪಿಯ ಅಧಿಕಾರ ದಬ್ಬಾಳಿಕೆಯ ಇತ್ತೀಚಿನ ಪುರಾವೆಯಾಗಿದೆ. ಜನಪ್ರತಿನಿಧಿಯ ಟೀಕೆಗಳ ಭಯಕ್ಕೆ ಬಂಧಿಸಲಾಗಿದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೂ ದಾಳಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಗುಜರಾತ್‍ನ ಪಾಲನ್‍ಪುರದ ಸರ್ಕ್ಯೂಟ್ ಹೌಸ್‍ನಿಂದ ಬಂಧಿಸಿದ್ದಾರೆ.