ಬೆಂಗಳೂರು: ತಮಿಳುನಾಡು ಸಿಎಂ (Tamilnadu CM) ಆಗಿ ವಿಜಯ್ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕರೆ ಮಾಡಿ, ಅಭಿನಂದನೆ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಅವರು ವಿಜಯ್‌ಗೆ ಕರೆ ಮಾಡಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ನಾನು ಸಿದ್ದರಾಮಯ್ಯ ಮಾತಾಡ್ತಿದ್ದೀನಿ. ಇತಿಹಾಸ ಸೃಷ್ಟಿ ಮಾಡಿದ ನಿಮಗೆ ಅಭಿನಂದನೆಗಳು. ಬೆಂಗಳೂರಿಗೆ ಬಂದಾಗ ಇಬ್ಬರು ಭೇಟಿಯಾಗೋಣ ಎಂದು ಹೇಳಿದ್ದಾರೆ. ಇದನ್ನೂ ಓದಿ: The Love Is Always Louder – ಪ್ರೀತಿ ಪಾಠ ಮಾಡಿದ ನಟಿ ತ್ರಿಶಾ
ಎಕ್ಸ್‌ನಲ್ಲಿಯೂ ಶುಭಾಶಯ ತಿಳಿಸಿ ಸಿಎಂ ಸಿದ್ದರಾಮಯ್ಯ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ಸಿನಿಮಾ ಪ್ರಪಂಚದಿಂದ ಜನಸೇವೆಯತ್ತ ಗಮನಾರ್ಹ ಪ್ರಜಾಪ್ರಭುತ್ವ ಪ್ರಯಾಣ ಬೆಳೆಸುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಶೀ ಜೋಸೆಫ್ ವಿಜಯ್ ಅವರಿಗೆ ಅಭಿನಂದನೆಗಳು. ಕರ್ನಾಟಕ ಮತ್ತು ತಮಿಳುನಾಡು ನಡುವೆ ಜನರ ಅಭಿವೃದ್ಧಿ, ಸಾಂಸ್ಕೃತಿಕ ಬಾಂಧವ್ಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡೋಣ. ತಮಿಳುನಾಡಿನ ಜನರ ಸೇವೆಯಲ್ಲಿ ಯಶಸ್ವಿ ಮತ್ತು ಪರಿವರ್ತನಾತ್ಮಕ ಆಡಳಿತ ನೀಡಲು ಶುಭಾಶಯ ತಿಳಿಸಿದ್ದಾರೆ.
Chief Minister of Tamil Nadu, Shri @actorvijay, has scripted a remarkable democratic journey from the world of cinema to the service of the people.
I extend my heartfelt congratulations to him on taking oath as the Chief Minister of Tamil Nadu.
Karnataka and Tamil Nadu share…
— Siddaramaiah (@siddaramaiah) May 10, 2026
ಚೊಚ್ಚಲ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿವಿಕೆ 108 ಸ್ಥಾನಗಳನ್ನು ಪಡೆದುಕೊಂಡಿತ್ತು. ಬಳಿಕ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳ ಬೆಂಬಲದೊಂದಿಗೆ ಬಹುಮತ ಸಾಬೀತುಪಡಿಸಿ, ಭಾನುವಾರ (ಮೇ 10) ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿಜಯ್ ಸಿಎಂ ಆಗಿ ಗದ್ದುಗೆ ಏರಿದ್ದಾರೆ. ಮೇ 13ರವರೆಗೆ ಬಹುಮತ ಸಾಬೀತು ಪಡಿಸಲು ಗವರ್ನರ್ ಅವರು ವಿಜಯ್‌ಗೆ ಕಾಲಾವಕಾಶ ನೀಡಿದ್ದಾರೆ.ಇದನ್ನೂ ಓದಿ: ವಯಸ್ಸು 29, ಪಂಚ ಭಾಷೆಗಳಲ್ಲಿ ಪ್ರವೀಣೆ; ವಿಜಯ್ ಸಂಪುಟದಲ್ಲಿ ಸ್ಥಾನ ಪಡೆದ ಅತಿ ಕಿರಿಯ ಸಚಿವೆ ಯಾರು?

