ನವದೆಹಲಿ: ಬ್ರಿಟನ್‌ನ (Britain) ಮುಂದಿನ ಪ್ರಧಾನಿಯಾಗಿ (British Prime Minister) ಭಾರತ ಮೂಲದ ರಿಷಿ ಸುನಾಕ್ (Rishi Sunak) ಆಯ್ಕೆಯಾಗಿದ್ದಾರೆ. ಇದೀಗ ಯುಕೆಯ ಪ್ರಧಾನಿಯಾಗಿ ಅಧಿಕಾರವನ್ನು ಅಲಂಕರಿಸಲಿರುವ ಮೊದಲ ಭಾರತೀಯ ವ್ಯಕ್ತಿಯಾಗಿಯೂ ಸುನಾಕ್ ಹೊರಹೊಮ್ಮಿದ್ದಾರೆ.
Advertisement
ರಿಷಿ ಸುನಾಕ್ ಯಾರು?
42 ವರ್ಷದ ರಿಷಿ ಸುನಾಕ್ ಭಾರತ ಮತ್ತು ಪೂರ್ವ ಆಫ್ರಿಕಾದಿಂದ ವಲಸೆ ಬಂದ ಶ್ರೀಮಂತ ಹಿಂದೂ ವಂಶಸ್ಥರಾಗಿದ್ದಾರೆ. ಅವರು ಇನ್ಫೋಸಿಸ್ (Infosys) ಸಹ ಸಂಸ್ಥಾಪಕ ನಾರಾಯಣ ಮೂರ್ತಿ (Narayana Murthy) ಹಾಗೂ ಸುಧಾ ಮೂರ್ತಿ (Sudha Murthy) ದಂಪತಿಯ ಪುತ್ರಿ ಅಕ್ಷತಾ ಮೂರ್ತಿಯ ಪತಿಯಾಗಿದ್ದಾರೆ.
Advertisement
Advertisement
ಸುನಾಕ್ ಅವರ ತಂದೆ ಯಶವೀರ್ ಸುನಾಕ್ ಅವರು ರಾಷ್ಟ್ರೀಯ ಆರೋಗ್ಯ ಸೇವೆಯ ಸಾಮಾನ್ಯ ವೈದ್ಯರಾಗಿದ್ದು, ತಾಯಿ ಉಷಾ ಸುನಾಕ್ ಅವರು ರಸಾಯನಶಾಸ್ತ್ರಜ್ಞರ ಅಂಗಡಿಯನ್ನು ನಡೆಸುತ್ತಿದ್ದರು. ತಂದೆ ಹಾಗೂ ತಾಯಿ ಸ್ಥಳೀಯ ಸಮುದಾಯಗಳಿಗೆ ಸೇವೆ ಸಲ್ಲಿಸುವುದನ್ನು ನೋಡುತ್ತಾ ಬೆಳೆದಿದ್ದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದೀಗ ಕೆಲಸ ಮಾಡಲು ನಾನು ಅದೃಷ್ಟಶಾಲಿಯಾಗಿದ್ದೇನೆ ಎಂದು ಈ ಹಿಂದೆ ಸಂದರ್ಶನವೊಂದರಲ್ಲಿ ಸುನಾಕ್ ಹೇಳಿಕೊಂಡಿದ್ದರು. ಇದನ್ನೂ ಓದಿ: ಭಾರತೀಯ ಸಂಜಾತ, ಸುಧಾಮೂರ್ತಿ ಅಳಿಯ ರಿಷಿ ಸುನಾಕ್ ಬ್ರಿಟನ್ ನೂತನ ಪ್ರಧಾನಿ
Advertisement
ಸುನಾಕ್ ಅವರು ಕ್ಯಾಲಿಫೋರ್ನಿಯಾದಲ್ಲಿ ಅಧ್ಯಯನ ನಡೆಸುತ್ತಿದ್ದ ವೇಳೆ ಅಕ್ಷತಾ ಮೂರ್ತಿಯವರನ್ನು ಭೇಟಿಯಾಗಿದ್ದರು. ಬಳಿಕ ವೈವಾಹಿಕ ಜೀನವಕ್ಕೆ ಕಾಲಿಟ್ಟ ಸುನಾಕ್ ಹಾಗೂ ಅಕ್ಷತಾ ಮೂರ್ತಿ ದಂಪತಿಗೆ ಇದೀಗ ಕೃಷ್ಣ ಹಾಗೂ ಅನುಷ್ಕಾ ಎಂಬ ಇಬ್ಬರು ಪುತ್ರಿಯರಿದ್ದಾರೆ.
ಸುನಾಕ್ ಅವರು 2015ರಲ್ಲಿ ರಿಚ್ಮಂಡ್ (ಯಾರ್ಕ್ಸ್) ಕ್ಷೇತ್ರದಿಂದ ಮೊದಲ ಬಾರಿ ಸಂಸದರಾಗಿ ಆಯ್ಕೆಯಾದರು. ಬಳಿಕ 2017 ಹಾಗೂ 2019ರಲ್ಲೂ ಮರು ಆಯ್ಕೆಯಾದರು. 2018ರಲ್ಲಿ ಸಚಿವರಾಗಿ ಸರ್ಕಾರಿ ಸೇವೆಗೆ ಪ್ರವೇಶಿಸಿದ ಸುನಾಕ್ ಅವರನ್ನು 2019ರ ಜುಲೈಯಲ್ಲಿ ಬ್ರಿಟನ್ ಹಣಕಾಸಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಬಳಿಕ 2020ರ ಫೆಬ್ರವರಿಯಲ್ಲಿ ಬ್ರಿಟನ್‌ನ ಹಣಕಾಸು ಸಚಿವರಾಗಿ ನೇಮಕಗೊಂಡರು. ಇದನ್ನೂ ಓದಿ: ಬ್ರಿಟನ್ ಪ್ರಧಾನಿ ಚುನಾವಣೆ; ಸುನಾಕ್ ಮುನ್ನಡೆ, ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮೊರ್ಡಂಟ್‌ಗೆ ಒತ್ತಡ