– ಮನೆಗೆ ನುಗ್ಗಿ ಸಾಯಿಸ್ತೀವಿ ಎಂದು ಬೆದರಿಕೆ
ಚಿಕ್ಕಮಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ (CT Ravi) ಹಾಗೂ ಅವರ ಮಗ ಸೂರ್ಯನಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಪತ್ರವೊಂದು ಬಂದಿದೆ.ಇದನ್ನೂ ಓದಿ:ಬಿಡುಗಡೆಯಾಯ್ತು `ರುದ್ರ ಗರುಡ ಪುರಾಣ’ದ ನಶೆಯೇರಿಸೋ ಸಾಂಗು!
Advertisement
Advertisement
ಸಿ.ಟಿ ರವಿ ಸ್ವಗೃಹಕ್ಕೆ ಅನಾಮಧೇಯ ವ್ಯಕ್ತಿಗಳು ಪತ್ರ ಕಳುಹಿಸಿದ್ದಾರೆ. ಪತ್ರದಲ್ಲಿ ಇನ್ನೂ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲ ಮುರಿದು ಸಾಯಿಸುತ್ತೇವೆ. ನಿನ್ನ ಕೈ ಕಾಲು ಮುರಿಯುತ್ತೇವೆ, ಪ್ರಾಣ ತೆಗೆಯುತ್ತೇವೆ ಹಾಗೂ ನಿನ್ನ ಮಗನನ್ನೂ ಸಾಯಿಸುತ್ತೇವೆ. ಹುಷಾರ್… ಹುಷಾರ್… ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Advertisement
ಈ ಕುರಿತು ಸಿ.ಟಿ ರವಿ ಅವರು ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಇದನ್ನೂ ಓದಿ: ನಕಲಿ ಸಿಗರೇಟ್ ಸರಬರಾಜು ಮಾಡ್ತಿದ್ದ ಕೇರಳ ಗ್ಯಾಂಗ್ ಅರೆಸ್ಟ್ – ಕೋಟಿ ಮೌಲ್ಯದ ಸಿಗರೇಟ್ ಸೀಜ್