ಪಂಚ ರಾಜ್ಯಗಳ ಚುನಾವಣೆ ಮುಗಿಯಿತು – ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಸಜ್ಜಾಗಿ

Public TV
1 Min Read
petrol

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಮುಗಿದು ಫಲಿತಾಂಶ ಕೂಡ ಹೊರಬಿದ್ದಿದೆ. ಈ ಬೆನ್ನಲ್ಲೇ ಅಡುಗೆ ಎಣ್ಣೆ ದರ ಏರಿಕೆ ಮಧ್ಯೆ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಪೆಟ್ರೋಲ್, ಡಿಸೇಲ್ ದರ ಏರಿಕೆ ಆಗುವ ಸಾಧ್ಯತೆ ದಟ್ಟವಾಗಿದೆ.

petrol price 2

ಪಂಚರಾಜ್ಯಗಳ ಚುನಾವಣೆ ಘೋಷಣೆ ಆದ ಬಳಿಕ ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಏರಿಕೆ ಆಗಿರಲಿಲ್ಲ. ಇದೀಗ ಚುನಾವಣೆ ಮುಗಿದು ಫಲಿತಾಂಶ ಕೂಡ ಸಿಕ್ಕಾಗಿದೆ. ಇದೀಗ ಕೇಂದ್ರ ತೈಲ ದರವನ್ನು ಹೆಚ್ಚಿಸಲು ಚಿಂತಿಸಿದೆ. ಕೆಲ ದಿನಗಳಿಂದ ಅಡುಗೆ ಎಣ್ಣೆ ಬೆಲೆ ಏರಿಕೆ ಕಂಡಿದೆ. ಆದರೆ ಪೆಟ್ರೋಲ್, ಡಿಸೇಲ್ ದರ ಮಾತ್ರ ಏರಿಕೆ ಕಂಡಿರಲಿಲ್ಲ. ಆದರೆ ಸದ್ಯದಲ್ಲೇ ಏರಿಕೆ ಕಾಣುವ ಸಾಧ್ಯತೆ ಇದೆ. ಇದನ್ನೂ ಓದಿ: ಪಂಚರಾಜ್ಯಗಳ ಫಲಿತಾಂಶದ ಬೆನ್ನಲ್ಲೇ ರಾಜ್ಯಕ್ಕೆ ಬರಲಿದ್ದಾರೆ ಮೋದಿ – ಕಲಬುರಗಿಗೆ ಯಾಕೆ?

PUNJAB ELECTION

ಒಂದು ಕಡೆ ರಷ್ಯಾ, ಉಕ್ರೇನ್ ನಡುವಿನ ಯುದ್ಧದಿಂದಾಗಿ ಕಚ್ಚಾ ತೈಲ ಬೆಲೆ ಏರಿಕೆ ಕಾಣುತ್ತಿದೆ. ಹಾಗಾಗಿ ತೈಲ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಇದರಿಂದಾಗಿ ಸರ್ಕಾರ ಜನರ ಮೇಲೆ ತೈಲ ಹೊರೆ ಹಾಕಲು ಸಜ್ಜಾಗುತ್ತಿದೆ. ಈವರೆಗೆ ಪಂಚ ರಾಜ್ಯಗಳ ಚುನಾವಣೆ ಗಮನದಲ್ಲಿಟ್ಟು ತೈಲ ಬೆಲೆ ಏರಿಕೆ ಆಗಿರಲಿಲ್ಲ. ಚುನಾವಣೆ ಘೋಷಣೆಗೂ ಮುನ್ನಾ ತೈಲ ಬೆಲೆ ಗಗನಕ್ಕೇರಿತ್ತು. ಆ ಬಳಿಕ ಸ್ಥಿರತೆ ಕಾಪಾಡಿಕೊಂಡಿದ್ದ ದರ ಇದೀಗ ಏರಿಕೆಯತ್ತ ಹೆಜ್ಜೆ ಇಡಲು ಸಿದ್ಧವಾಗಿದೆ. ಇದನ್ನೂ ಓದಿ: Exclusive -ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಚುನಾವಣೆ?

ಉಕ್ರೇನ್ ಮತ್ತು ರಷ್ಯಾ ಯುದ್ಧದ ಪರಿಣಾಮ ಕೆಲ ವಸ್ತುಗಳ ಬೆಲೆ ಏರಿಕೆ ಕಾಣುತ್ತಿದೆ. ಹೀಗಾಗಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕೂಡ ಏರಿಕೆ ಆಗುವ ಸಾಧ್ಯತೆ ಇದೆ. ಸದ್ಯಕ್ಕೆ ಪೆಟ್ರೋಲ್ ರೇಟ್ ಲೀಟರ್‌ಗೆ 100.06 ರೂಪಾಯಿ. ಮತ್ತು ಡಿಸೇಲ್ ಬೆಲೆ ಲೀಟರ್‌ಗೆ 85.04 ರೂಪಾಯಿ ಇದೆ. ಕೆಲದಿನಗಳಲ್ಲಿ ತೈಲ ಬೆಲೆ 2 ರಿಂದ 3 ಅಥವಾ ಅದಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ.

Share This Article