ಡೆಹ್ರಾಡೂನ್: ಹರಿದ್ವಾರ ದ್ವೇಷ ಭಾಷಣ ಪ್ರಕರಣದಲ್ಲಿ ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿ ಅವರ ಬಂಧನಕ್ಕೆ ಪ್ರಕರಣದ ಮತ್ತೊಬ್ಬ ಆರೋಪಿ ಯತಿ ನರಸಿಂಘಾನಂದ ಖಂಡನೆ ವ್ಯಕ್ತಪಡಿಸಿದ್ದಾರೆ. ತ್ಯಾಗಿಯನ್ನು ಬಂಧಿಸಲು ಮುಂದಾದ ಪೊಲೀಸರ ವಿರುದ್ಧವೂ ಹರಿಹಾಯ್ದಿದ್ದಾರೆ.
ಹರಿದ್ವಾರದ ಧರ್ಮ ಸಂಸದ್‌ನಲ್ಲಿ ದ್ವೇಷ ಭಾಷಣ ಮಾಡಿದ ಕಾರಣಕ್ಕಾಗಿ ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿಯನ್ನು ಪೊಲೀಸರು ಬಂಧಿಸಿದರು. ಮತ್ತೊಬ್ಬ ಆರೋಪಿ ಯತಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ʻನೀವು, ನಿಮ್ಮ ಮಕ್ಕಳು ಸಾಯುತ್ತೀರಿʼ ಎಂದು ಬಂಧನಕ್ಕೆ ಮುಂದಾಗಿದ್ದ ಪೊಲೀಸರಿಗೆ ಹಿಡಿಶಾಪ ಹಾಕಿದ್ದಾರೆ. ಇದನ್ನೂ ಓದಿ: ದಲಿತ ಮತಗಳ ಮೇಲೆ ಕಣ್ಣು- ಎರಡು ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಸ್ಪರ್ಧೆ?
Advertisement
Advertisement
ತ್ಯಾಗಿಯನ್ನು ಯಾಕೆ ಬಂಧಿಸುತ್ತಿದ್ದೀರಿ ಎಂದು ಯತಿ ಪ್ರಶ್ನಿಸಿದ್ದಾರೆ. ಅದಕ್ಕೆ ಪೊಲೀಸರು ಸಮಜಾಯಿಷಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಯತಿ, ಮೂರು ಪ್ರಕರಣಗಳಲ್ಲಿ ನಾನೂ ಅವರೊಟ್ಟಿಗಿದ್ದೇನೆ. ಅವರು ಒಬ್ಬರೇ ಈ ಕೆಲಸ ಮಾಡಿದ್ದಾರೆ ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ನೀವು ಮತ್ತು ನಿಮ್ಮ ಮಕ್ಕಳು ಸಾಯುತ್ತೀರಿ ಎಂದು ಶಪಿಸಿದ್ದಾರೆ.
Advertisement
ಜಿತೇಂದ್ರ ತ್ಯಾಗಿ ಮೂಲತಃ ಮುಸ್ಲಿಂ ಸಮುದಾಯದವರು. ವಾಸೀಂ ರಿಜ್ವಿಯಾಗಿದ್ದ ಅವರು ಹಿಂದೂ ಧರ್ಮಕ್ಕೆ ಮತಾಂತರರಾಗಿ ಜಿತೇಂದ್ರ ತ್ಯಾಗಿಯಾದರು. ಈಚೆಗೆ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಪಾಲ್ಗೊಂಡಿದ್ದ ವೇಳೆ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ರೇಷನ್ ಕಾರ್ಡ್ ಇದೆಯಾ: ಸ್ನಾನ ಮಾಡ್ತಿದ್ದ ವ್ಯಕ್ತಿ ಬಳಿ ಹೋಗಿ ಬಿಜೆಪಿ ಶಾಸಕನ ಪ್ರಶ್ನೆ
Advertisement
ದ್ವೇಷ ಭಾಷಣ ಪ್ರಕರಣದಲ್ಲಿ ತ್ಯಾಗಿ, ನರಸಿಂಘಾನಂದ ಸೇರಿದಂತೆ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ತ್ಯಾಗಿ ಅವರನ್ನು ರೂರ್ಕಿಯಲ್ಲಿ ಬಂಧಿಸಲಾಗಿದೆ ಎಂದು ಹರಿದ್ವಾರ ಹಿರಿಯ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಯೋಗೇಂದ್ರ ರಾವತ್ ತಿಳಿಸಿದ್ದಾರೆ.
ದ್ವೇಷ ಭಾಷಣ ಪ್ರಕರಣದ ತಪ್ಪಿತಸ್ಥರನ್ನು ಶೀಘ್ರವೇ ಬಂಧಿಸಬೇಕು. ಪ್ರಕರಣ ಕುರಿತು ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ 10 ದಿನದೊಳಗೆ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿತ್ತು.