ಸಾಲು ಸಾಲು ಯುವನಟಿಯರ ಸಾವಿನ ಸರಣಿ ಮುಂದುವರೆದಿದೆ. ಅದರಲ್ಲೂ ಆತ್ಮಹತ್ಯೆಯ (Suicide) ಪ್ರಕರಣಗಳು ಜಾಸ್ತಿ ಆಗುತ್ತಿವೆ. ಮಲಯಾಳಂ (Malayalam) ಸಿನಿಮಾ ರಂಗದಲ್ಲಿ ಮತ್ತೋರ್ವ ಯುವನಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಕೇವಲ 34ನೇ ವಯಸ್ಸಿನಲ್ಲೇ ರೆಂಜುಶಾ ಮೆನನ್ (Renjusha Menon) ಎಂಬ ಯುವನಟಿ ಹೆಣವಾಗಿ ಪತ್ತೆಯಾಗಿದ್ದಾರೆ.
ನಿಜಲಟ್ಟಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ರೆಂಜುಶಾ ಮೆನನ್ ಇಂದು ನಿಧನರಾಗಿದ್ದಾರೆ ಎಂದು ಅವರ ಆಪ್ತರು ಖಚಿತ ಪಡಿಸಿದ್ದಾರೆ. ಸಿನಿಮಾ ಮತ್ತು ಕಿರುತೆರೆ ಎರಡೂ ರಂಗದಲ್ಲಿ ಗುರುತಿಸಿಕೊಂಡಿದ್ದ ರೆಂಜುಶಾ, ತಿರುವನಂತಪುರಂನ (Thiruvananthapuram) ಶ್ರೀಕಾರ್ಯಂನಲ್ಲಿ ವಾಸವಿದ್ದರು. ವಾಸವಿದ್ದ ಮನೆಯಲ್ಲೇ ಅವರ ಮೃತದೇಹ ಪತ್ತೆಯಾಗಿದೆ.
ಹಣಕಾಸಿನ ಸಮಸ್ಯೆಯಿಂದ ಅವರು ನೇಣಿಗೆ ಶರಣಾಗಿರಬಹುದು ಎಂದು ಹೇಳಲಾಗುತ್ತಿತ್ತು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಟಿಯಾಗಿ, ಲೈನ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡುತ್ತಿದ್ದ ರೆಂಜುಶಾ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.
ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಸಕ್ರಿಯರಾಗಿ ಅನೇಕ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ಉತ್ತಮ ಡಾನ್ಸರ್ ಕೂಡ ಆಗಿದ್ದರು. ಸಾಕಷ್ಟು ಜನಪ್ರಯ ಶೋಗಳಲ್ಲಿ ಭಾಗಿಯಾಗಿರುವ ಹೆಗ್ಗಳಿಕೆ ಇವರದ್ದಾಗಿತ್ತು.
Web Stories