CrimeDistrictsKarnatakaLatestMain PostUdupi

ಕಾರೊಳಗೆ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ!

Advertisements

ಉಡುಪಿ: ಕಾರಿನೊಳಗಡೆಯೇ ಪೆಟ್ರೋಲ್ ಸುರಿದುಕೊಂಡು ಜೋಡಿಯೊಂದು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಈ ಘಟನೆ ನಡೆದಿದೆ. ಮೃತ ಯುವಕ, ಯುವತಿಯನ್ನು ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದೆ.

ಕಳೆದ ಮೂರು ದಿನಗಳ ಹಿಂದೆ ಮಿಸ್ಸಿಂಗ್ ಕೇಸು ದಾಖಲಾಗಿತ್ತು. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೊತ್ತಿ ಉರಿಯುತ್ತಿದ್ದ ಕಾರು ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದಾಗ ಇಬ್ಬರ ಶವ ಪತ್ತೆಯಾಗಿದೆ. ಇದನ್ನೂ ಓದಿ: ಹಿಮಾಚಲ ಉಪಸಭಾಧ್ಯಕ್ಷರಿಂದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಆರೋಪ

ನಿನ್ನೆ ಮಂಗಳೂರಿಗೆ ಬಂದು ಹುಸೇನ್ ಎಂಬವರಿಂದ ಈ ಜೋಡಿ ಸ್ವಿಫ್ಟ್ ಕಾರು ಬಾಡಿಗೆ ಪಡೆದಿತ್ತು. ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.

Leave a Reply

Your email address will not be published.

Back to top button