ಆನೇಕಲ್: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಅತಿವೇಗವಾಗಿ ಬೈಕ್ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಮತ್ತು ಯುವತಿ ಮೃತಪಟ್ಟಿರುವ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮಾರತಹಳ್ಳಿ ಮೂಲದ ಗಗನ್ ದೀಪ್ ಹಾಗೂ ಬನಶಂಕರಿ ಮೂಲದ ಯಶಸ್ವಿನಿ ಮೃತಪಟ್ಟ ದುರ್ದೈವಿಗಳು. ಇಂದು ಮುಂಜಾನೆ ಸರ್ಜಾಪುರದಿಂದ ಮನೆಗೆ ವಾಪಸ್ ಹೋಗುವಾಗ ಅತಿ ವೇಗವಾಗಿ ಚಲಿಸಿ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಸರ್ಜಾಪುರದ ಪ್ರೆಸ್ಟೀಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಟೀ ಅಂಗಡಿಯಲ್ಲಿ ಅಗ್ನಿ ಅವಘಡ- ಬಾಲಕಿ ಗಂಭೀರ
ಮೃತದೇಹಗಳನ್ನು ಅತ್ತಿಬೆಲೆ ಆಕ್ಸ್ಫರ್ಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಳಗ್ಗಿನ ಜಾವ ಯುವಕ-ಯುವತಿ ಎಲ್ಲಿಗೆ ಹೋಗಿ ಬರುತ್ತಿದ್ದರು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆಯನ್ನು ನಡೆಸುತ್ತಿದ್ದಾರೆ.