ಬೀದರ್: ತಾನು ಪ್ರೀತಿಸುತ್ತಿದ್ದ ಯುವತಿಯ ಪೋಷಕರು ಮನೆಗೆ ಬಂದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವಕನೋರ್ವ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಭಾಲ್ಕಿ ಪಟ್ಟಣದ ರೈಲ್ವೆ ಗೇಟ್ ಬಳಿ ನಡೆದಿದೆ.
Advertisement
ಸಚಿನ್ ರಾಮ್‍ರಾವ್ ವಾಂಗೆ (18) ಆತ್ಮಹತ್ಯೆಗೆ ಶರಣಾದ ಯುವಕ. ಭಾಲ್ಕಿ ಪಟ್ಟಣದ ಗುರು ಪ್ರಸನ್ನ ಐಟಿಐ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದ ಸಚಿನ್ ತನ್ನ ಕ್ಲಾಸ್‍ಮೇಟ್ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ.
Advertisement
Advertisement
ಸಚಿನ್ ಮತ್ತು ಯುವತಿಯ ನಡುವಿನ ಲವ್ ವಿಷಯ ತಿಳಿದ ಯುವತಿಯ ಪೋಷಕರು ಸಚಿನ್ ಮನಗೆ ಬಂದು ಗಲಾಟೆ ಮಾಡಿದ್ದರು. ಈ ವೇಳೆ ಸಚಿನ್ ಪೋಷಕರಿಗೂ ಬೈದಿದ್ರು. ತನ್ನಿಂದಾಗಿ ಪೋಷಕರಿಗೆ ಸಾರ್ವಜನಿಕವಾಗಿ ಅವಮಾನವಾಯಿತು ಎಂದು ಮನನೊಂದು ಸಚಿನ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಗುಲ್ಬರ್ಗಾ ರೈಲ್ವೆ ವಿಭಾಗದ ಡಿವೈಎಸ್‍ಪಿ ಬಸವರಾಜು ಪಬ್ಲಿಕ್ ಟಿವಿಗೆ ಹೇಳಿದ್ದಾರೆ.
Advertisement
ಘಟನಾ ಸ್ಥಳಕ್ಕೆ ಬೀದರ್ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.