ಬೆಂಗಳೂರು | ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕ ಅರೆಸ್ಟ್

Public TV
1 Min Read
Shivaji Nagar Arrest

ಬೆಂಗಳೂರು: ಮಹಿಳೆಯರಿಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕನನ್ನ ಶಿವಾಜಿನಗರ ಪೊಲೀಸರು (Shivaji Nagar Police) ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಏ.13 ರಂದು ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಘಟನೆ ನಡೆದಿತ್ತು. ಊಟ ಮುಗಿಸಿ ಎರಡನೇ ಮಹಡಿಗೆ ಮಲಗಲು ಮಹಿಳೆ ತೆರಳುತ್ತಿದ್ದರು. ಈ ವೇಳೆ ಎದುರು ಮನೆಯಲ್ಲಿರುವ ಆರೋಪಿ, ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ. ಇದನ್ನು ಪ್ರಶ್ನೆ ಮಾಡಿದ ಮಹಿಳೆಯ ಪತಿ ಮೇಲೆ ಹಲ್ಲೆ ಕೂಡ ಮಾಡಿದ್ದ. ಅಲ್ಲದೇ ಜಗಳ ಬಿಡಿಸಲು ಬಂದವರ ಮೇಲೆಯೂ ಅಟ್ಯಾಕ್ ಮಾಡಿದ್ದ.ಇದನ್ನೂ ಓದಿ: ಬೆಂಗಳೂರಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕ ವಾಹನದ ಗ್ಲಾಸ್ ಹೊಡೆದ ಪುಡಿ ರೌಡಿ!

ಎರಡನೇ ಮಹಡಿಯಿಂದ ಹಾಲೋಬ್ಲಾಕ್, ಹೂವಿನ ಪಾಟ್ ಅನ್ನು ಕೆಳಮಹಡಿಯಲ್ಲಿದ್ದವರ ಮೇಲೆ ಎಸೆದಿದ್ದ. ಬುದ್ಧಿ ಹೇಳಲು ಹೋಗಿದ್ದವರ ಮೇಲೆಯೂ ಹಲ್ಲೆ ಮಾಡಿದ್ದ. ಘಟನೆಯಲ್ಲಿ ಏಳು ಜನರ ಮೇಲೆ ಹಲ್ಲೆ ನಡೆಸಿದ್ದ ಬಗ್ಗೆ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಶಿವಾಜಿ ನಗರ ಪೊಲೀಸರು ಆರೋಪಿ ಕಾರ್ತಿಕ್‌ನನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ. ವಿಚಾರಣೆ ವೇಳೆ ನಾನು ಮೂತ್ರವಿಸರ್ಜನೆ ಮಾಡುತ್ತಿದೆ. ಆ ಸಮಯದಲ್ಲಿ ಮಹಿಳೆ ಬಂದಿದ್ದಾಳೆ. ಈ ವೇಳೆ ಗಲಾಟೆಯಾಗಿದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.ಇದನ್ನೂ ಓದಿ: ಸುಂಕ ಸಮರದ ನಡುವೆ ಯುಎಸ್‌ ಅಧ್ಯಕ್ಷರನ್ನ ಭೇಟಿಯಾದ ಇಟಲಿ ಪ್ರಧಾನಿ – ಮೆಲೊನಿ ಶ್ರೇಷ್ಠ ಪ್ರಧಾನಿ ಎಂದ ಟ್ರಂಪ್‌

Share This Article