CrimeDistrictsKarnatakaLatestLeading NewsMain Post

ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!

ಮಂಗಳೂರು: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ಚಲಿಸುತ್ತಿದ್ದ ಲಾರಿಯಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಗರದ ಗಾಂಧಿನಗರ ಎಂಬಲ್ಲಿ ನಡೆದಿದೆ. ಯುವಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದ್ದು, ಈತ ಹಾವೇರಿ ಮೂಲದವನು. ಯುವಕನ ಈ ಕೃತ್ಯಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಯುವಕ ಲಾರಿಯಡಿಗೆ ಏಕಾಏಕಿ ಹಾರಿದ್ದನ್ನು ಗಮನಿಸಿದ ಚಾಲಕ ತಕ್ಷಣವೇ ಬ್ರೇಕ್ ಹಾಕಿದ್ದಾರೆ. ಈ ಮೂಲಕ ಬಾರೀ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆಯಿಂದ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯ ಮಾಸ್ಟರ್‌ಮೈಂಡ್ ಆರೋಪಿ ಅರೆಸ್ಟ್

ಮೈ ಝುಂ ಎನಿಸೋ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ – ವೃದ್ಧ ಸಾವು, ನಾಲ್ವರಿಗೆ ಗಾಯ

Leave a Reply

Your email address will not be published.

Back to top button