ತಿರುವನಂತಪುರಂ: ಕೂದಲು (Hair) ಉದುರುವ ಸಮಸ್ಯೆಯಿಂದ ಮನನೊಂದ ಯುವಕನೊಬ್ಬ (Youth) ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ (Kerala) ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.
ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ. ಪ್ರಶಾಂತ್ ವೆಹಿಕಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಪ್ರಶಾಂತ್‍ಗೆ ಹುಬ್ಬು ಸೇರಿದಂತೆ ತಲೆಕೂದಲು ಉದುರುತ್ತಿತ್ತು. ಇದರಿಂದಾಗಿ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಿದರೂ ತಲೆ ಕೂದಲು ಉದುರುವುದು ನಿಂತಿರಲಿಲ್ಲ. ಆದರೆ ಅದ್ಯಾವುದು ಪ್ರಯೋಜನವಾಗಿರಲಿಲ್ಲ. ಅಷ್ಟೇ ಅಲ್ಲದೇ ಕೂದಲು ಇಲ್ಲ ಎಂದು ಅನೇಕರು ಆತನನ್ನು ಮದುವೆಯಾಗಲು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದ ಪ್ರಶಾಂತ ಆತ್ಮಹತ್ಯೆಗೆ ಶರಣಾಗಿದ್ದಾನೆ.
Advertisement
Advertisement
ಇದೆಲ್ಲದರಿಂದ ಆತ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ. ಪ್ರಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದು, ಕೂದಲು ಉದುರುವ ಸಮಸ್ಯೆಯಿಂದ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಕೂದಲು ಉದುರುವ ಸಮಸ್ಯೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ. ಇದನ್ನೂ ಓದಿ: ಟ್ವಿಟ್ಟರ್ ಖಾತೆ ಬ್ಲಾಕ್ ಆದೇಶ ರದ್ದು – ಕೆಜಿಎಫ್ ಹಾಡು ಬಳಸಿದ್ದ ಕಾಂಗ್ರೆಸ್‌ಗೆ ಬಿಗ್ ರಿಲೀಫ್
Advertisement
Advertisement
ಘಟನೆಗೆ ಸಂಬಂಧಿಸಿ ಪ್ರಶಾಂತ್ ಕುಟುಂಬಸ್ಥರು ವೈದ್ಯರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾಪಿ ಹೊಡೆದು ಸಿಕ್ಕಿಬಿದ್ದ ವಿದ್ಯಾರ್ಥಿ- 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ