ಮಂಡ್ಯ: ತಮ್ಮ ನಾಯಕರೇ ಗ್ರೇಟ್ ಎಂದು ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ನಡುವೆ ನಡೆದ ಗಲಾಟೆ ಯುವಕನೊಬ್ಬನ ಆತ್ಮಹತ್ಯೆಯಲ್ಲಿ ಕೊನೆಯಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ, ಗೊಬ್ಬರಗಾಲ ಗ್ರಾಮದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ಕ್ಷೇತ್ರದ ಮಾಜಿ ಶಾಸಕ ರಮೇಶ್‍ಬಾಬು ಬಂಡಿಸಿದ್ದೇಗೌಡ ಬೆಂಬಲಿಗ 28 ವರ್ಷದ ನಾಗೇಂದ್ರ ಆತ್ಮಹತ್ಯೆಗೆ ಶರಣಾದ ಯುವಕ. ಭಾನುವಾರ ರಾತ್ರಿ ಅರಕೆರೆ ಗ್ರಾಮದ ಬಾರಿನಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತು ಮಾಜಿ ಶಾಸಕ ರಮೇಶ್‍ಬಾಬು ಬಂಡಿಸಿದ್ದೇಗೌಡ ಬೆಂಬಲಿಗ ಯುವಕರ ಗುಂಪಿನ ನಡುವೆ ತಮ್ಮ ನಾಯಕರೇ ಗ್ರೇಟ್ ಎಂದು ಗಲಾಟೆಯಾಗಿದೆ. ಈ ವೇಳೆ ಶಾಸಕರ ಬೆಂಬಲಿಗರು ನಾಗೇಂದ್ರನ ಮೇಲೆ ಹಲ್ಲೆ ಮಾಡಿದ್ದಾರೆ.
ಅಷ್ಟೇ ಅಲ್ಲದೇ ನಾಗೇಂದ್ರನ ಸ್ವಗ್ರಾಮ ಗೊಬ್ಬರಗಾಲ ಗ್ರಾಮಕ್ಕೆ ತೆರಳಿ ಮತ್ತೆ ಆತನ ಎದುರು ಗಲಾಟೆ ಮಾಡಿದ್ದಾರೆ. ಇದರಿಂದ ಮನನೊಂದ ಮಾಜಿ ಶಾಸಕ ಬೆಂಬಲಿಗ ಗ್ರಾಮದ ಕೆರೆಯ ಬಳಿ ಇರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews