ಬೆಂಗಳೂರು: ಪಿಎಸ್ಐ (PSI) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವಿಜಯನಗರದಲ್ಲಿ (Vijayanagar) ನಡೆದಿದೆ.
ಬೀದರ್ (Bidar) ಮೂಲದ ಅಭಿಷೇಕ್ (24) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಈತ ವಿಜಯನಗರದ ಖಾಸಗಿ ಪಿಜಿಯೊಂದರಲ್ಲಿ ಸ್ನೇಹಿತರೊಂದಿಗೆ ವಾಸವಿದ್ದುಕೊಂಡು ಪಿಎಸ್ಐ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ. ಶನಿವಾರ ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮನೆ ಮಾಲೀಕರೇ ಹುಷಾರ್- ಬಾಡಿಗೆ ಕೇಳೋ ನೆಪದಲ್ಲಿ ಮಾಡ್ತಾರೆ ಅಟ್ಯಾಕ್
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಗೋವಿಂದರಾಜನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಐಪಿಎಲ್ ಬೆಟ್ಟಿಂಗ್ ಹಣಕ್ಕಾಗಿ ಯುವಕನ ಕೊಲೆ