ದಾವಣಗೆರೆ: ಖಾಸಗಿ ಹೋಟೆಲ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಹೃದಯಾಘಾತಕ್ಕೊಳಗಾಗಿ (Heart Attack) ಯುವಕ (Youth) ಸಾವನ್ನಪ್ಪಿರುವ ಘಟನೆ ದಾವಣಗೆರೆ (Davanagere) ಜಿಲ್ಲೆ ಜಗಳೂರು (Jagalur) ಪಟ್ಟಣದಲ್ಲಿ ನಡೆದಿದೆ.
ಸುಭಾನ್ (25) ಮೃತ ಯುವಕ. ಖಾಸಗಿ ಹೋಟೆಲ್ ಕಾರ್ಯಕ್ರಮಕ್ಕೆ ನೆನಪಿರಲಿ ಪ್ರೇಮ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. ಈ ವೇಳೆ ಊಟಕ್ಕೆ ಕೂತಿದ್ದಾಗ ಹೃದಯಾಘಾತವಾಗಿದೆ. ಇದನ್ನೂ ಓದಿ: ದೇಶದ ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – ಪಾರದರ್ಶಕತೆಯತ್ತ ಕೇಂದ್ರದಿಂದ ಮತ್ತೊಂದು ದಿಟ್ಟ ಹೆಜ್ಜೆ
ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕ ಕೊನೆಯುಸಿರೆಳೆದಿದ್ದಾನೆ. ಘಟನೆ ಸಂಬಂಧ ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಎಂಟಿಸಿ ಬಸ್ ಡಿಕ್ಕಿ – ಬೈಕ್ ಸವಾರ ಸಾವು

