ವಿಜಯಪುರ: ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ (Dance) ಮಾಡುವ ಸಂದರ್ಭ ಹೃದಯಾಘಾತಕ್ಕೊಳಗಾಗಿ (Heart Attack) ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ (Vijayapura) ನಗರದ ಚಪ್ಪರಬಂದ ಕಾಲೋನಿಯಲ್ಲಿ ನಡೆದಿದೆ.
ಮಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಹೃದಯಾಘಾತದಿಂದ ಮೃತಪಟ್ಟ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದಾನೆ. ಇದನ್ನೂ ಓದಿ: ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನ – ಶಂಕಿತ ಪಾಕಿಸ್ತಾನಿ ಹೊಡೆದುರುಳಿಸಿದ ಬಿಎಸ್‌ಎಫ್
ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: Ramanagara | ಸರ್ಕಾರದ ಇ ಸ್ವತ್ತು ಸಾಫ್ಟ್‌ವೇರ್ ಹ್ಯಾಕ್ ಮಾಡಿ ದಾಖಲೆಗಳ ತಿದ್ದುಪಡಿ – ಮೂವರ ಬಂಧನ