ಚಿಕ್ಕಬಳ್ಳಾಪುರ: ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ (Devanahalli) ವಿಜಯಪುರ ಪಟ್ಟಣದಲ್ಲಿ ನಡೆದಿದೆ.
ಮೃತ ಯುವಕನನ್ನು ಉಜ್ವಲ್ (18) ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಾಗಿದ್ದ. ಯುವಕ ಮನೆಯಲ್ಲಿ ಮೌನವಾಗಿರುತ್ತಿದ್ದ. ಹೆಚ್ಚಾಗಿ ಮೊಬೈಲ್‍ನಲ್ಲೇ ಕಾಲ ಕಳೆಯುತ್ತಿದ್ದ. ಈ ವಿಚಾರವಾಗಿ ಅವನ ತಾಯಿ ಹಲವಾರು ಬಾರಿ ಬುದ್ಧಿವಾದ ಹೇಳಿದ್ದರು. ಅಲ್ಲದೇ ಬುಧವಾರ ರಾತ್ರಿ ತಡವಾಗಿ ಮನೆಗೆ ಬಂದಿದ್ದಾನೆ. ಇದಕ್ಕಾಗಿ ಯುವಕನ ತಾಯಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿ ಬುದ್ಧಿವಾದ ಹೇಳಿದ್ದರು. ಬಳಿಕ ರಾತ್ರಿ ಊಟ ಮಾಡಿ, ತನ್ನ ಕೋಣೆಯ ಒಳಗೆ ಹೋಗಿದ್ದ. ಇದನ್ನೂ ಓದಿ: ಸೇನೆಗೆ ಪ್ರಬಲ ಶಸ್ತ್ರಾಸ್ತ್ರಗಳ ಬಲ ನೀಡಿದ್ದ DRDO ಮಾಜಿ ಮುಖ್ಯಸ್ಥ ನಿಧನ
Advertisement
Advertisement
ಬೆಳಗ್ಗೆ 7 ಗಂಟೆಯಾದರೂ ಬಾಗಿಲು ತೆರೆಯದಿದ್ದಾಗ ಯುವಕನ ಸಹೋದರ ಬಾಗಿಲು ಬಡಿದಿದ್ದಾನೆ. ಬಳಿಕ ಬೀಗ ಹಾಕುವ ರಂಧ್ರದಲ್ಲಿ ಇಣುಕಿ ನೋಡಿದಾಗ ನೇಣು ಬಿಗಿದು ಕೊಂಡಿರುವುದು ಕಂಡು ಬಂದಿದೆ. ತಕ್ಷಣ ತನ್ನ ಮಾವಂದಿರಿಗೆ ಮಾಹಿತಿ ನೀಡಿ, ಅಕ್ಕಪಕ್ಕದವರನ್ನು ಕರೆದು ಬಾಗಿಲು ತೆರೆಯಲು ಪ್ರಯತ್ನ ಮಾಡಿದ್ದಾರೆ. ಒಳಗಿನಿಂದ ಲಾಕ್ ಮಾಡಿದ್ದ ಕಾರಣ ತೆರೆಯಲು ಸಾಧ್ಯವಾಗಿಲ್ಲ. ಬಳಿಕ ಬಾಗಿಲನ್ನು ಒಡೆದಿದ್ದಾರೆ. ಈ ವೇಳೆ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
Advertisement
Advertisement
ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಿಮಾಚಲ, ಉತ್ತರಾಖಂಡದಲ್ಲಿ ಮಳೆಗೆ 81 ಸಾವು – ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ
Web Stories