ಚಿಕ್ಕೋಡಿ: ಮದುವೆಯಾಗಲು (Marriage) ಹೆಣ್ಣು ಸಿಗದ ಕಾರಣ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಕ್ಕೇರಿಯಲ್ಲಿ (Hukkeri) ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಾಥ ಸುರೇಶ್ ಕೇಸ್ತಿ (27) ಎಂದು ಗುರುತಿಸಲಾಗಿದೆ. ಯುವಕ ನಗರದಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ. ಅತಿಯಾದ ಸಾಲ ಹಾಗೂ ಮದುವೆಗೆ ಹೆಣ್ಣು ಸಿಗದೆ ನೊಂದಿದ್ದ. ಇದೇ ಕಾರಣಕ್ಕೆ ಗ್ಯಾರೇಜ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮದುವೆ ಪಲ್ಲಕ್ಕಿಯಲ್ಲಿ ಹೋಗಬೇಕಿದ್ದವಳು ಶವದ ಪೆಟ್ಟಿಗೆಯಲ್ಲಿ ಹೋದಳು: ಅಪಘಾತಕ್ಕೆ ಬಲಿಯಾದ ಯುವತಿ ತಾಯಿ ಕಣ್ಣೀರು
ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ನಾಡಬಂದೂಕು ತಯಾರಿಸಿ ಮಾರಾಟ – ಮೂವರು ಅರೆಸ್ಟ್