Connect with us

Districts

ದಲಿತರಿಗೆ ಕ್ಷೌರ ಮಾಡಲ್ಲ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕರು

Published

on

Share this

ಕೊಪ್ಪಳ: ದಲಿತರಿಗೆ ಕ್ಷೌರ ಮಾಡುವುದಿಲ್ಲ ಎಂದು ಕ್ಷೌರಿಕರು ಹೇಳಿದ್ದಕ್ಕೆ ಮನನೊಂದು ಯುವಕರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಯಲಬುರ್ಗಾ ತಾಲೂಕಿನ ಹೊಸಳ್ಳಿಯಲ್ಲಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಕ್ಷೌರಿಕರು ಜಗಳ ಮಾಡಿದ್ದಾರೆ. ಇದರಿಂದ ನೊಂದ ದಲಿತ ಯುವಕರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂಬಂಧ 16 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಹೊಸಳ್ಳಿಯಲ್ಲಿ ಜೂ. 6 ರಂದು ಗ್ರಾಮದ ಸಣ್ಣ ಹನುಮಂತ ಹಾಗೂ ಬಸವರಾಜ ಎಂಬವರು ಕ್ಷೌರ ಮಾಡಿಸಲು ಹೋಗಿದ್ದರು. ಆಗ ಕ್ಷೌರಿಕರು ದಲಿತರಿಗೆ ಕ್ಷೌರ ಮಾಡಲು ನಿರಾಕರಣೆ ಮಾಡಿದ್ದಾರೆ. ನಮಗೆ ಯಾಕೆ ಕ್ಷೌರ ಮಾಡುವುದಿಲ್ಲ ಎಂದು ದಲಿತರು ಪ್ರಶ್ನಿಸಿದ್ದು ನಂತರ ಎಂದು ವಾಗ್ವಾದ ನಡೆದಿದೆ. ಇದನ್ನು ಓದಿ: ಹಿಂದೂ ಧಾರ್ಮಿಕ ದತ್ತಿಯಿಂದ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ- ವಿಹೆಚ್‍ಪಿ ವಿರೋಧ

ಇದೇ ಸಂದರ್ಭದಲ್ಲಿ ಸ್ಥಳೀಯ ಸವರ್ಣೀಯರು ಸೇರಿಕೊಂಡು ಕ್ಷೌರ ಮಾಡಿಸಿಕೊಳ್ಳಲು ಬಂದವರ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಗಲಾಟೆಯ ನಂತರ ಇಬ್ಬರು ಯುವಕರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಯಲಬುರ್ಗಾ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಘಟನೆಯ ಬಳಿಕ ಇಬ್ಬರು ಕ್ಷೌರಿಕರು ಹಾಗೂ ಸ್ಥಳೀಯ 14 ಜನರ ಮೇಲೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೊಪ್ಪಳ ಡಿವೈಎಸ್‍ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಇದನ್ನು ಓದಿ: ವೆಂಟಿಲೇಟರ್ ಕದ್ದು ಪರಾರಿಯಾದ ಖತರ್ನಾಕ್ ಕಳ್ಳರು

Click to comment

Leave a Reply

Your email address will not be published. Required fields are marked *

Advertisement