ಹಾವೇರಿ: ರಾಜ್ಯಮಟ್ಟದ ಹೋರಿ ಸ್ಪರ್ಧೆ (Bull Competition) ನಡೆಯುತ್ತಿದ್ದ ವೇಳೆ ಕೊಬ್ಬರಿ ಹೋರಿ (Bull) ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದು, 10 ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಮಂಜುನಾಥ್ ಚಳ್ಳಕ್ಕನವರ (27) ಎಂದು ಗುರುತಿಸಲಾಗಿದೆ. ಮಂಜುನಾಥ್ ಸಂಗೂರು ಗ್ರಾಮದ ನಿವಾಸಿಯಾಗಿದ್ದು, ರಾಜ್ಯಮಟ್ಟದ ಹೋರಿ ಹಬ್ಬವನ್ನು ವೀಕ್ಷಿಸಲು ತೆರಳಿದ್ದ. ಹೋರಿ ಹಬ್ಬವನ್ನು ನೋಡುತ್ತಿದ್ದ ವೇಳೆ ಹೋರಿ ತಿವಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ 6 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಪ್ರೇಯಸಿಯ ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತಾಕಿದ ಪ್ರಿಯಕರ – 15 ದಿನದ ಬಳಿಕ ಪ್ರಕರಣ ಬೆಳಕಿಗೆ
Advertisement
Advertisement
ಮಂಜುನಾಥ್‌ನ ಹೊಟ್ಟೆಯ ಎಡಭಾಗಕ್ಕೆ ಹೋರಿ ತಿವಿದಿದ್ದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಯುವಕನ ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತನ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಕಾಗಿನೆಲೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಕತಾರ್‌ನಲ್ಲಿ ಫಿಫಾ ವಿಶ್ವಕಪ್ ವರದಿ ಮಾಡುತ್ತಿದ್ದಾಗಲೇ ಮತ್ತೊಬ್ಬ ಪತ್ರಕರ್ತ ಸಾವು