ಬೆಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ (Accident) ಬೈಕ್ ಚಾಲಕ ಸಾವನ್ನಪ್ಪಿದ ಘಟನೆ ಆನೇಕಲ್‍ನಲ್ಲಿ (Anekal) ನಡೆದಿದೆ.
ಮೃತನನ್ನು ಆನೇಕಲ್ ಪಟ್ಟಣದ ನಿವಾಸಿ ಪ್ರೇಮ್ ಕುಮಾರ್ ಎಂದು ಗುರುತಿಸಲಾಗಿದೆ. ಆನೇಕಲ್ ಪಟ್ಟಣದ ಅನ್ನಪೂರ್ಣೇಶ್ವರಿ ಚಿತ್ರ ಮಂದಿರದ ರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಒನ್ ವೇನಲ್ಲಿ ವೇಗವಾಗಿ ದ್ವಿಚಕ್ರ ವಾಹನದಲ್ಲಿ ಪ್ರೇಮ್ ಬಂದಿದ್ದಾನೆ. ಈ ವೇಳೆ ಟಿಪ್ಪರ್ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.
ಕಲ್ಲನ್ನು ತಪ್ಪಿಸಲು ಹೋಗಿ ಲಾರಿಯತ್ತ ಬೈಕ್‍ನ್ನು ಪ್ರೇಮ್ ತಿರುಗಿಸಿದ್ದಾನೆ. ಮೃತದೇಹವನ್ನು ಆನೇಕಲ್‍ನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.