ಕಲಬುರಗಿ: ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನನ್ನ ನಡುರಸ್ತೆಯಲ್ಲಿ ಬರ್ಬರವಾಗಿ ಕೊಚ್ಚಿ ಕೋಲೆಗೈದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೊಲೆಗೀಡಾದ ಯುವಕ. ವಿಜಯ ಅನ್ಯಕೋಮಿನ ಯುವತಿಯನ್ನು ಪ್ರೀತಿ ಮಾಡುತ್ತಿದ್ದನು. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ವಿಜಯನನ್ನು ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನು ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು, ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಇಂದು ರಾಜ್ಯಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ
ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಈ ಕುರಿತು ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿ ಮುಖಂಡ ಆತ್ಮಹತ್ಯೆ ಪ್ರಕರಣ – ಅನಂತರಾಜು ಜೊತೆಗಿನ ಖಾಸಗಿ ವೀಡಿಯೋ ಇದೆ ಎಂಬ ಗೆಳತಿ ಚಾಟಿಂಗ್ ವೈರಲ್