ಸರ್ಕಾರಿ ಶಾಲಾ ಆವರಣದಲ್ಲಿ ಯುವಕನ ಶವ ಪತ್ತೆ

Public TV
1 Min Read
BELAGAVI MURDER

ಬೆಳಗಾವಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ್ (23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಬೆಳಗಾವಿ (Belagavi) ಜಿಲ್ಲೆ ಮಾರಿಹಾಳ ಸರ್ಕಾರಿ ಕನ್ನಡ ಶಾಲಾ ಕೊಠಡಿಯ ಎದುರು ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ.

BELAGAVI MURDER 1

ಬೆಳ್ಳಂಬೆಳಗ್ಗೆ ರಕ್ತದ ಮಡುವಿನಲ್ಲಿ ಬಿದ್ದ ಯುವಕನ ಮೃತದೇಹ ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್‍ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾರೀಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿದವನಿಗೆ ಮಹಿಳೆಯಿಂದ ಚಪ್ಪಲಿ ಸೇವೆ

Share This Article