Connect with us

Crime

ಹಾಡಹಗಲೇ ಅಟ್ಟಾಸಿಕೊಂಡು ಹೋಗಿ ಯುವಕನ ಬರ್ಬರ ಹತ್ಯೆ

Published

on

– ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
– ಓಡಿ ಹೋದ್ರು ಜೀವ ಉಳಿಸಿಕೊಳ್ಳಲು ಆಗಿಲ್ಲ

ಚೆನ್ನೈ: ಹಾಡಹಗಲೇ ನಾಲ್ವರು ದುಷ್ಕರ್ಮಿಗಳು ಯುವಕನನ್ನು ಅಟ್ಟಾಡಿಸಿಕೊಂಡು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ರಾಣಿಪೇಟೆಯಲ್ಲಿ ನಡೆದಿದೆ.

ಮೃತನನ್ನು 28 ವರ್ಷದ ಗೋಕುಲ್ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಅರಕ್ಕೋಣಂ ನ್ಯೂ ಬಸ್ ನಿಲ್ದಾಣದ ಬಳಿಯ ಟಿಎಎಸ್‍ಎಂಎಸಿ (Tamil Nadu State Marketing Corporation company)ಗೆ ಹೋಗುವಾಗ ಈ ಘಟನೆ ನಡೆದಿದೆ.

ನಾಲ್ವರು ಆರೋಪಿಗಳು ಕೂಡ ಸ್ಥಳದಲ್ಲಿದ್ದು, ಗೋಕುಲ್‍ನ ಅಡ್ಡಗಟ್ಟಿದ್ದಾರೆ. ಆಗ ಯುವಕ ಅವರಿಂದ ತಪ್ಪಿಸಿಕೊಂಡು ಓಡಲು ಪ್ರಾರಂಭಿಸಿದ್ದಾನೆ. ಆದರೆ ದುಷ್ಕರ್ಮಿಗಳು ಆತನ ಬೆನ್ನಟ್ಟಿ ಹಿಡಿದು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಈ ವೇಳೆ ಸಾರ್ವಜನಿಕರು ಭಯದಿಂದ ಅಲ್ಲಿಂದ ಓಡಿ ಹೋಗಿದ್ದಾರೆ. ಆದರೆ ತೀವ್ರ ರಕ್ತಸ್ರಾವದಿಂದ ಗೋಕುಲ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಇಡೀ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡಸಿದ್ದಾರೆ. ಅಲ್ಲದೇ ಪ್ರಕರಣದ ತನಿಖೆಗಾಗಿ ಪೊಲೀಸರು ಸಿಸಿಟಿವಿ ವೀಡಿಯೊಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಆರೋಪಿಗಳನ್ನು ಇನ್ನೂ ಗುರುತಿಸಲಾಗಿಲ್ಲ ಮತ್ತು ಕೊಲೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯಕ್ಕೆ ಗೋಕುಲ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *