ಮೈಸೂರು: ರೈಲಿಗೆ ತಲೆ ಕೊಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಂಜನಗೂಡಿನ ಮಲ್ಲನಮೂಲೆ ಮಠದ ಸಮೀಪದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹರವೆ ಗ್ರಾಮದ ಕುಮಾರ್ ಎಂಬವರ ಪುತ್ರ ಮನೋಜ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಬುಧವಾರ ರಾತ್ರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
- Advertisement 2
ಮೃತ ಮನೋಜ್ ತಂದೆಯ ಜೊತೆಗೆ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ, ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.