Thursday, 16th August 2018

Recent News

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ

ಮೈಸೂರು: ರೈಲಿಗೆ ತಲೆ ಕೊಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಂಜನಗೂಡಿನ ಮಲ್ಲನಮೂಲೆ ಮಠದ ಸಮೀಪದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹರವೆ ಗ್ರಾಮದ ಕುಮಾರ್ ಎಂಬವರ ಪುತ್ರ ಮನೋಜ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಬುಧವಾರ ರಾತ್ರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮೃತ ಮನೋಜ್ ತಂದೆಯ ಜೊತೆಗೆ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ, ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *