ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ಯುವಕ ಅರೆಸ್ಟ್

Public TV
1 Min Read
mobile 2

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಯಶ್ ಭಂಡಾರೆ(19) ಬಂಧಿತ ಆರೋಪಿ. ಯಶ್ ಮುಂಬೈನ ಚೆಂಬೂರ್ ಪ್ರದೇಶದ ನಿವಾಸಿ. ಈತ ಅಪ್ರಾಪ್ತೆಗೆ ಇನ್‍ಸ್ಟಾಗ್ರಾಮ್‍ನಲ್ಲಿ ಪರಿಚಯವಾಗಿದ್ದ. ಪರಿಚಯದ ಮೂಲಕವೇ ಬಾಲಕಿಯ ಖಾಸಗಿ ಫೋಟೋಗಳನ್ನು ಪಡೆದುಕೊಂಡಿದ್ದ. ನಂತರ ಇನ್‍ಸ್ಟಾಗ್ರಾಮ್‍ನಲ್ಲಿ ನಕಲಿ ಖಾತೆ ಮಾಡಿ ಫೋಟೋಗಳನ್ನು ಶೇರ್ ಮಾಡುವುದಾಗಿ ಬೆದರಿಸಿ ಆಕೆಗೆ ಕಿರುಕುಳ ನೀಡುತ್ತಿದ್ದ.

arrested

ಈ ಕುರಿತು ಬಾಲಕಿಯು ತನ್ನ ತಾಯಿಗೆ ತಿಳಿಸಿದ್ದಾಳೆ. ಬಾಲಕಿಯ ತಾಯಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ತಂತ್ರಜ್ಞಾನದ ಸಹಾಯದಿಂದ ಯಶ್ ಮುಂಬೈನಲ್ಲಿರುವುದನ್ನು ಪತ್ತೆ ಹಚ್ಚಿದ್ದಾರೆ. ನಂತರ ಪೊಲೀಸರ ತಂಡವೊಂದು ಮುಂಬೈಗೆ ತೆರಳಿ ಯಶ್‍ನನ್ನು ಬಂಧಿಸಿದೆ. ಇದನ್ನೂ ಓದಿ: ಯಾರನ್ನಾದರೂ ಮುಟ್ಟಲಿ ನೋಡೋಣ, ನಾವು ಪಾದಯಾತ್ರೆ ಮಾಡಿಯೇ ಮಾಡುತ್ತೇವೆ: ಡಿಕೆಶಿ

Police Jeep

ಯಶ್ ಭಂಡಾರೆ ವಿರುದ್ಧ ಭಾರತೀಯ ದಂಡ ಸಂಹಿತೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆಗಟ್ಟುವಿಕೆ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.  ಇದನ್ನೂ ಓದಿ: ಅಂಡರ್‌ಗ್ರೌಂಡ್‌ನಲ್ಲಿ ಕಂತೆ ಕಂತೆ ನೋಟು ಬಚ್ಚಿಟ್ಟಿದ್ದ ಉದ್ಯಮಿ – ಇವನ ಆಸ್ತಿ ಬಗ್ಗೆ ಮಾಹಿತಿ ನೀಡಿದ್ರೆ 10,000 ಬಹುಮಾನ

Share This Article
Leave a Comment

Leave a Reply

Your email address will not be published. Required fields are marked *