ಶಿವಮೊಗ್ಗ: ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ (Shivamogga) ಸೀಗೆಟಹಳ್ಳಿ ಬಳಿ ನಡೆದಿದೆ.
ಜೂನ್ 1 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದನ್ ಹಲ್ಲೆಗೊಳಗಾದ ಯುವಕ. ನಂದನ್ ಹಾಗೂ ಅನ್ಯಕೋಮಿನ ಯುವತಿ ಒಂದೇ ಖಾಸಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸದ ನಿಮಿತ್ತ ನಂದನ್ ಹಾಗೂ ಯುವತಿ ಬೈಕ್‌ನಲ್ಲಿ ಹೋಗುತ್ತಿದ್ದರು. ಬೈಕ್‌ನಲ್ಲಿ ಹೋಗುವುದನ್ನು ಗಮನಿಸಿದ ಅನ್ಯಕೋಮಿನ ಯುವಕರು ಬೈಕ್ ಅಡ್ಡಗಟ್ಟಿದ್ದಾರೆ. ಬಳಿಕ ನಂದನ್ ಅನ್ನು ಸ್ಥಳೀಯ ಟಿಂಬರ್ ಯಾರ್ಡ್ವೊಂದಕ್ಕೆ ಎಳೆದೊಯ್ದು ಹಲ್ಲೆ (Assault) ನಡೆಸಿದ್ದಾರೆ. ಸ್ಥಳದಿಂದ ತಪ್ಪಿಸಿಕೊಂಡು ಯುವಕ ಓಡಿ ಬಂದಿದ್ದಾನೆ. ಇದನ್ನೂ ಓದಿ: ಮಗಳ ಪ್ರೇಮ ವಿವಾಹಕ್ಕೆ ನೊಂದು ಮಹಿಳೆ ಆತ್ಮಹತ್ಯೆ
ಹಲ್ಲೆಗೊಳಗಾದ ಯುವಕನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕ ಚನ್ನಬಸಪ್ಪ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಇಬ್ಬರು ಪ್ರಯಾಣಿಕರ ಸಾವು, 7 ಮಂದಿ ಗಂಭೀರ