ಹಾಸನ: ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿದ್ದ ಯುವಕ, ಧಿಡೀರ್ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆ, ಸಕಲೇಶಪುರ (Sakleshpura) ತಾಲೂಕಿನ ಗುಡಾನ್ಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಆದರ್ಶ್ (20) ಮೃತಪಟ್ಟ ಯುವಕ. ಕಳೆದ ಎರಡು ತಿಂಗಳ ಹಿಂದೆ ನಡೆದ ಅಪಘಾತದಲ್ಲಿ ಆದರ್ಶ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಗುಣಮುಖರಾಗಿದ್ದರು ಎನ್ನಲಾಗಿದೆ. ಆದರೆ ಕೆಲವು ದಿನಗಳ ಹಿಂದೆ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ತೀವ್ರ ವಾಂತಿ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ತಕ್ಷಣವೇ ಸಕಲೇಶಪುರ ಪಟ್ಟಣದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂದಿನ 3 ಗಂಟೆ ಭಾರೀ ಮಳೆ ಎಚ್ಚರಿಕೆ – 2 ದಿನ ಯೆಲ್ಲೋ ಅಲರ್ಟ್
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆದರ್ಶ್ ಮೃತಪಟ್ಟಿದ್ದಾರೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ರೈಲಿನಲ್ಲಿ ಮಲಗಿದ್ದ 6 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ- ಪರಾರಿಯಾಗಿದ್ದ ಆರೋಪಿ ಅರೆಸ್ಟ್

