ವಿಜಯಪುರ: ಭೀಮಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ವಿಜಯಪುರದಲ್ಲಿ ನಡೆದಿದೆ.
ಸಿದ್ದರಾಮ ಸುತಾರ(18) ಮೃತ ದುರ್ದೈವಿ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದ ಭೀಮಾ ನದಿಯಲ್ಲಿ ಸಿದ್ದರಾಮ ಈಜಲು ಹೋಗಿದ್ದು, ನೀರುಪಾಲಾಗಿದ್ದರು. ತಕ್ಷಣ ಸ್ಥಳೀಯರು ಆತನನ್ನು ಕಾಪಾಡಲು ಯತ್ನಿಸಿದ್ದು, ಫಲಕಾರಿಯಾಗದೆ ಸಿದ್ದರಾಮ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಕ್ರಮವಹಿಸಬೇಕು: ಕಾರಜೋಳ
ಸ್ಥಳದಲ್ಲಿ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಂಡಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ್ಕೆ ಜೀವಗಳು ಬಲಿ
ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.