ಬಾಗಲಕೋಟೆ: ಜಿಲ್ಲೆಯ ಬಾದಾಮಿ (Badami) ಪಟ್ಟಣದ ಐತಿಹಾಸಿಕ ಅಗಸ್ತ್ಯ ಹೊಂಡದಲ್ಲಿ (Agastya Lake) ಈಜಲು ಹೋಗಿ 19 ವರ್ಷದ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಬಾದಾಮಿಯ ಜಯನಗರ ನಿವಾಸಿ ಮನೋಜ್ ಪ್ರಕಾಶ್ ಕಂಬ್ಳೇಕರ್ (19) ನಾಪತ್ತೆಯಾದ ಯುವಕ. ಮನೋಜ್ ಹೊಂಡದ ಬದಿ ತನ್ನ ಬಟ್ಟೆಗಳನ್ನು ಕಳಚಿಟ್ಟು, ಈಜಲು ಹೊಂಡಕ್ಕೆ ಹಾರಿದ್ದಾನೆ ಎನ್ನಲಾಗಿದೆ. ಮನೋಜ್ ನೀರಿನಿಂದ ಮೇಲಕ್ಕೆ ಬರದೇ ಇದ್ದಾಗ ಸಾರ್ವಜನಿಕರು 112 ಪೊಲೀಸ್ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇಂದು 19ನೇ ಉದ್ಯೋಗ ಮೇಳ – ಮೋದಿಯಿಂದ 50,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ
ಪೊಲೀಸರು ಯುವಕನ ಗುರುತು ಪತ್ತೆ ಹಚ್ಚಲು ಕುಟುಂಬಸ್ಥರ ಸಹಾಯ ಪಡೆದುಕೊಂಡಿದ್ದು, ಬಳಿಕ ನಾಪತ್ತೆಯಾಗಿರುವ ವ್ಯಕ್ತಿ ಮನೋಜ್ ಎಂದು ತಿಳಿದು ಬಂದಿದೆ. ಇದನ್ನೂ ಓದಿ: NEET UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್ – ಎನ್‌ಟಿಎ ಎಕ್ಸ್‌ಪರ್ಟ್ ಬಂಧನ
ಪ್ರಸ್ತುತ ಅಗ್ನಿಶಾಮಕ ದಳದ ಠಾಣಾಧಿಕಾರಿಗಳ ತಂಡದೊಂದಿಗೆ ತೀವ್ರಗತಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಇದುವರೆಗೆ ಯುವಕನ ಶವ ಪತ್ತೆಯಾಗಿಲ್ಲ. ಇದನ್ನೂ ಓದಿ: ಇಂದಿನಿಂದ 4 ದಿನ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಭಾರತ ಪ್ರವಾಸ

