ಬೀದರ್: ಮೀನು ಹಿಡಿಯಲು ಹೋದ ಯುವಕ ಈಜು ಬಾರದೇ ನೀರಿನಲ್ಲಿ ಮುಳುಗಿ ನೀರು ಪಾಲಾದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಸೇತುವೆ ಬಳಿ ನಡೆದಿದೆ.
ಭಾಲ್ಕಿ ಪಟ್ಟಣದ ಬಸವನಗರ ನಿವಾಸಿ ಸಂತೋಷ್ ಧರ್ಮರಾಜ್ ಕಟ್ಟಿಮನಿ(30) ನೀರುಪಾಲಾದ ಯುವಕ. ಕಾರಂಜಾ ಜಲಾಶಯಕ್ಕೆ ಅಡ್ಡಲಾಗಿ ನಿರ್ಮಿಸಿರುವ ದಾಡಗಿ ಸೇತುವೆ ಬಳಿ ಸಂತೋಷ್ ಅವರು ಬಲೆಯೊಂದಿಗೆ ಮೀನು ಹಿಡಿಯಲು ನೀರಿಗೆ ಇಳಿದಿದ್ದಾರೆ. ಆದರೆ ಈ ವೇಳೆ ಸಂತೋಷ್ ಕಾಲು ಜಾರಿ ನೀರಿಗೆ ಬಿದ್ದಿದ್ದು, ಈಜುಬಾರದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಶೇ.60-65 ಮತದಾನದ ನಡೆದರೆ ಪ್ರಿಯಾಂಕಾಗೆ ಗೆಲುವು: ಸುವೇಂದು
ಘಟನೆ ತಿಳಿದು ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿದ್ದು, ಅವರ ಆಕ್ರಂದನ ಮುಗಿಲುಮುಟ್ಟಿದೆ. ಖಟಕಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ವೈಟ್ ಬೋರ್ಡ್ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸೋದು ಅಕ್ಷಮ್ಯ ಅಪರಾಧ: ಸುಧಾಕರ್